ಜಾತಿ ಸಮೀಕ್ಷೆಗೆ ಸಾರ್ವಜನಿಕರು ಸಹಕರಿಸಲು ಮನವಿ: ಬಸವರಾಜ ಸಜ್ಜನ್

ಸುರಪುರ ಟೈಮ್ಸ್ ವಾರ್ತೆ
ಸುರಪುರ :ಸಮಾಜ ಕಲ್ಯಾಣ ಇಲಾಖೆ ಮೂಲಕ ಮೇ 5ರಿಂದ 17ರವರೆಗೆ ನಡೆಯುವ ಪರಿಶಿಷ್ಟ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜನರು ಯಾವುದೇ ಗೊಂದಲವಿಲ್ಲದಂತೆ ಗಣತಿದಾರರಿಗೆ ಮಾಹಿತಿ ನೀಡಬೇಕು’ ಸಾರ್ವಜನಿಕರಲ್ಲಿ ತಾಲೂಕು ಕಾರ್ಯನಿರ್ವಹಕ ಅಧಿಕಾರಿ ಬಸವರಾಜ ಸಜ್ಜನ ವಿನಂತಿಸಿ ಕೊಂಡಿದ್ದಾರೆ.
‘ಗಣತಿದಾರರು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ಪ್ರತಿ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಮಾಹಿತಿದಾರರು ಯಾರ ಒತ್ತಡಕ್ಕೂ ಒಳಗಾಗದೆ ನಿಸ್ಸಂಕೋಚವಾಗಿ ಜಾತಿ ಯಾವುದು ಎಂಬ ನಿಖರ ಮಾಹಿತಿ ನೀಡಬೇಕು. ಅವಶ್ಯವಿರುವ ದತ್ತಾಂಶ ಸಂಗ್ರಹಿಸಲು ಈ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ’ ಎಂದರು ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ
‘ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬಗಳು ಸಮೀಕ್ಷೆಯಿಂದ ತಪ್ಪಿ ಹೋಗದಂತೆ ನಿಗಾ ವಹಿಸಬೇಕು. ಪ್ರತಿ ಬೂತ್‍ಗಳಿಗೆ ನೇಮಿಸಿರುವ ಗಣತಿದಾರರು ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಎಲ್ಲ ಗಣತಿದಾರರಿಗೆ ಸೂಚಿಸಲಾಸಗಿದ್ದು, ಎಲ್ಲಾ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
