ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ ವಿಎಗಳಿಗೆ ಶಾಸಕ ಆರ್‌ವಿಎನ್ ಸಲಹೆ

ಸುರಪುರ ಟೈಮ್ಸ್ ವಾರ್ತೆ

ಸುರಪುರ:ಕಚೇರಿಗೆ ಬರುವ ಜನರ ಸಮಸ್ಯೆ ಆಲಿಸಿ ಕೂಡಲೇ ಕ್ರಮ ವಹಿಸಬೇಕು. ಅವರ ಅಲೆದಾಟ ತಪ್ಪಿಸಬೇಕು. ಪ್ರತಿಯೊಬ್ಬ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ವಿಧಾನಸೌಧ ಇಲ್ಲಿಯ ಮಿನಿ ಆವರಣದ ತಹಸೀಲ್ದಾ‌ರ್ ಕಚೇರಿಯ ಸಭಾಂಗಣದಲ್ಲಿ ತಹಸೀಲ್ದಾರ್ ಕಚೇರಿ ಹುಣಸಗಿ ಮತ್ತು ಸುರಪುರ ವತಿಯಿಂದ ಎರಡು ತಾಲೂಕಿನ ಗ್ರಾಮ ಆಡಳಿತಾಧಿ ಕಾರಿಗಳಿಗೆ ಕಂದಾಯ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಕ್ರೋಮ್ ಬುಕ್ (ಲ್ಯಾಪ್ ಟ್ಯಾಪ್) ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಚೇರರಿಯ
ಪ್ರತಿಯೊಂದು ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಗ್ರಾಮ ಆಡಳಿತಾಧಿಕಾರಿಗಳು ತಮ್ಮ ತಮ್ಮ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ತೊಂದರೆಯಾಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸರಕಾರಕ್ಕೆ ಒಳ್ಳೆಯ ಹೆಸರು ತರಬೇಕು ಎಂದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಎಚ್.ಎ.ಸರಕಾವಸ್, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಕಾಶ ಗುತ್ತೇದಾರ್, ನಗರಸಭೆ ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ ವೇದಿಕೆಯಲ್ಲಿದ್ದರು. ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ್ ಬಾಚಿಮಟ್ಟಿ, ನಗರಸಭೆ ಸದಸ್ಯರು ಹಾಗೂ ಕಂದಾಯ ಇಲಾಖೆಯ ಅಧಿ ಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಎಚ್.ಎ.ಸರಕಾವಸ್, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಕಾಶ ಗುತ್ತೇದಾರ್, ನಗರಸಭೆ ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ ವೇದಿಕೆಯಲ್ಲಿದ್ದರು. ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ್ ಬಾಚಿಮಟ್ಟಿ, ನಗರಸಭೆ ಸದಸ್ಯರು ಹಾಗೂ ಕಂದಾಯ ಇಲಾಖೆಯ ಅಧಿ ಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!