ಸಿಎಂ ಮಾಧ್ಯಮ ಸಲಹೆಗಾರ ಅವರಿಗೆ ಸನ್ಮಾನ

ಸುರಪುರ ಟೈಮ್ಸ್ ವಾರ್ತೆ

ಸುರಪುರ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಸನ್ಮಾನಿಸಿದರು.

ಮಂಗಳವಾರ ಬೆಂಗಳೂರಿನ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಸಂಕೀನ್ ಅವರು, ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಗೌರವಿಸಿದರು.ರಾಜ್ಯದ ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಮತ್ತು ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಪತ್ರಕರ್ತರು ಮತ್ತು ಹಾಗೂ ಅವಲಂಬಿತರ ವೈದ್ಯಕೀಯ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯ ಅನುಷ್ಠಾನಗೊಳಿಸುವ ಮೂಲಕ ನಾಡಿನ ಪತ್ರಕರ್ತರ ಹಿತ ಕಾಪಾಡಿದ ಹಿನ್ನೆಲೆಯಲ್ಲಿ ಸಂಘದ ವತಿಯಿಂದ ಗೌರವಿಸಲಾಯಿತು.ಇದೇ ವೇಳೆ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಕಳೆದ ಮೂರು ವರ್ಷಗಳಿಂದ ಸಂಘವು ನಡೆಸಿದ ಕಾರ್ಯ ಚಟುವಟಿಕೆಗಳನ್ನು ವಿವರವಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಅವರಿಗೆ ತಿಳಿಸಿದಾಗ ಸಾಧನೆ ಕೇಳಿ ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ರಾಜ್ಯ ಸರಕಾರದ ವತಿಯಿಂದ ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಸರಕಾರದಿಂದ ವಿಶೇಷವಾದ ಅನುದಾನ ಬಿಡುಗಡೆ ಮಾಡಿಸುವಂತೆ ಅಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪ್ರಭಾಕರ್ ಅವರು ಸರಕಾರದೊಂದಿಗೆ ಚರ್ಚಿಸುವ ಮೂಲಕ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

Leave a Reply

Your email address will not be published. Required fields are marked *

error: Content is protected !!