ಅನುಮೋದನೆಗಾಗಿ ಸಿಎಂಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಮನವಿ

ಸುರಪುರ ಟೈಮ್ಸ್ ವಾರ್ತೆ
ಸುರಪುರ; ನಗರದ ಎರಡನೇ ಹಂತದ ಒಳ ಚರಂಡಿ ಯೋಜನೆ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಈ ಸಂಬಂಧ ಸಿಎಂ ಅವರನ್ನು ಭೇಟಿಯಾದ ಅವರು ಸುರಪುರ ನಗರದ 2ನೇ ಹಂತದ ಒಳಚರಂಡಿ ಯೋಜನೆಗೆ 241.70 ಕೋಟಿ ರೂ. ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಬೇಕೆಂದು ಕೋರಿದರು.
ತಕ್ಷಣ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆಯ ಭರವಸೆ ನೀಡಿದರು. ಅದೇ ರೀತಿ ಅಲ್ಲಿಯೇ ಇದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಕೂಡ ಅನುಮೋದನೆ ನೀಡುವುದಾಗಿ ಶಾಸಕ ಆ‌ರ್ ವಿಎನ್‌ ಗೆ ತಿಳಿಸಿದರು.

ಪೋಟೋ:ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕಾಮಗಾರಿಯ ಬಗ್ಗೆ ವಿವರಣೆ ನೀಡಿದರು

Leave a Reply

Your email address will not be published. Required fields are marked *

error: Content is protected !!