ತ್ಯಾಗ ಬಲಿದಾನದಿಂದ ಕಲ್ಯಾಣ ಕರ್ನಾಟಕ ವಿಮೋಚನೆ: ಅಕ್ಕುಬಾಯಿ
ಸುರಪುರ ಟೈಮ್ಸ್ ವಾರ್ತೆ
ಸುರಪುರ: ಕಲ್ಯಾಣ ಕರ್ನಾಟಕ ಪ್ರದೇಶ ಐತಿಹಾಸಿಕ ಹಾಗೂ ಸಾಂಸ್ಕೃತಿಕವಾಗಿ ಹೆಚ್ಚು ಮಹತ್ವ ಪಡೆದಿರುವ ಪ್ರದೇಶವಾಗಿದೆ. ಹಲವು ನಾಯಕರ ತ್ಯಾಗ ಮತ್ತು ಬಲಿದಾನದಿಂದ ವಿಮೋಚನೆ ಪಡೆದ ನಂತರ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ, ಆರ್ಥಿಕ, ಸಾಂಸ್ಕೃತಿಕ, ಸಾಹಿತ್ಯ, ಕಲೆ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ತಾಲೂಕಿನ ತಿಂಥಣಿ ಗ್ರಾಮದ ಕಸ್ತೂರಿ ಬಾ ಬಾಲಕಾ ವಸತಿ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ನಿಜಾಮರ ಆಳ್ವಿಕೆಯಲ್ಲಿನ ದಬ್ಬಾಳಿಕೆ ಮತ್ತು ದೌರ್ಜನ್ಯದಿಂದ ಬೇಸತ್ತು ನಡೆಸಿದ ಹೋರಾಟ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ನಿರ್ಧಾರದಿಂದ 1948 ಸೆಪ್ಟಂಬರ್ 17ರಂದು ಕಲ್ಯಾಣ ಕರ್ನಾಟಕವು ಭಾರತ ಗಣರಾಜ್ಯದಲ್ಲಿ ಸೇರ್ಪಡೆಗೊಂಡಿತು. ರಜಾಕಾರರು ನಡೆಸಿದ ಅಮಾನವೀಯ ಘಟನೆಗಳು ಮತ್ತು ಕ್ರೂರತನದ ವಿರುದ್ಧ ಹೋರಾಟ ನಡೆಸಿ ಹಲವು ನಾಯಕರು ಪ್ರಾಣ ತೆತ್ತಿದ್ದಾರೆ. ಅವರನ್ನು ಇಂದು ಸ್ಮರಿಸಿಕೊಳ್ಳಬೇಕು’ ಎಂದರು.ಶಾಲೆಯ ಅವರು ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಮಹಾತ್ಮ ಗಾಂಧಿ, ಸರದಾರ ವಲ್ಲಭಭಾಯಿ ಪಟೇಲ್ ಹಾಗೂ ಡಾ. ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೇರವೇರಿಸಿದರು. ಇದೇ ವೇಳೆ ವಿಶ್ವಕರ್ಮ ಜಯಂತಿ ಆಚರಣೆ ಮಾಡಲಾಯಿತು.ಶಿಕ್ಷಕರಾದ ಸವಿತಾ, ಮೋನಿಕಾ, ಅಕ್ಕನಾಗಮ್ಮ, ಸುಮಿತ್ರಾ, ಶಿಲ್ಪಾ, ಸೇರಿದಂತೆ ಮಕ್ಕಳು ಪಾಲಕರು ಇದ್ದರು.



