ಪೌಷ್ಟಿಕತೆ ಹೆಚ್ಚಳಕ್ಕೆ ಪೋಷಣ್ ಮಾಸಾಚರಣೆ ; ತಿಪ್ಪಣ್ಣ ಶಿರಸಗಿ

ಸುರಪುರ ಟೈಮ್ಸ್ ವಾರ್ತೆ
ಸುರಪುರ: ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಕಿಶೋರಿಯರು ಅಪೌಷ್ಟಿಕತೆ, ರಕ್ತ ಹೀನತೆಯಿಂದ ಬಳಲುತ್ತಿದ್ದು, ಅವರಲ್ಲಿ ಪೌಷ್ಟಿಕತೆ ಹೆಚ್ಚಿಸಿ ಸದೃಢರನ್ನಾಗಿ ಮಾಡಲು ಪೋಷಣ್‌ ಮಾಸಾಚರಣೆ ಆಯೋಜಿಸಲಾಗುತ್ತಿದೆ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ತಿಪ್ಪಣ್ಣ ಶಿರಸಗಿ ಅವರು ಹೇಳಿದರು.
ನಗರದ ರಂಗಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಶನಿವಾರ ತಾಲೂಕ ಆಡಳಿತ, ತಾಲೂಕು ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ತಾಲೂಕು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆಯ
ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಗರ್ಭಿಣಿ ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಲು ಅಂಗನವಾಡಿ ಕಾರ್ಯಕರ್ತರು ಮನವರಿಕೆ ಮಾಡಬೇಕು. ಜೊತೆಗೆ ಪ್ರತಿ ಗರ್ಭಿಣಿಯರಿಗೂ ಪರೀಕ್ಷೆ ನಡೆಸಿ, 10 ಕ್ಕಿಂತ ಕಡಿಮೆ ಹಿಮೋಗ್ಲೋಬಿನ್ ಇರುವ ಮಹಿಳೆಯರಿಗೆ ಆರೋಗ್ಯದ ಅರಿವು ಮೂಡಿಸಬೇಕು ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲ್ ಸಾಬ್ ಪೀರಾಪುರ ಅವರು ಪ್ರಾಸ್ತಾವಿಕ ಮಾತನಾಡಿ, ಬಾಲ್ಯ ವಿವಾಹದಿಂದ ಮಾನಸಿಕ , ದೈಹಿಕ ಸದೃಢವಾಗಿ ರಕ್ತ ಹೀನತೆಯಿಂದಾಗಿ ಬಾಣಂತಿಯರು ಮರಣಹೊಂದುವ ಸಾಧ್ಯತೆಯಿದೆ. ಬಾಲ್ಯ ವಿವಾಹ ಮಾಡುವುದು ಮಹಾ ಅಪರಾಧವಾಗಿದೆ. ಬಾಲ್ಯ ವಿವಾಹ ಮಾಡಿದ ತಂದೆ-ತಾಯಿ ಹಾಗೂ ಅವರ ಜೊತೆ ಕೈ ಜೋಡಿಸಿದವರ ವಿರುದ್ಧ ಪೋಕ್ಸೊ ಕಾಯಿದೆ ಅಡಿಯಲ್ಲಿ ಜೈಲಿಗೆ ಹೋಗಬೇಕಾಗುತ್ತದೆ. ಈಗಾಗಲೇ ಕಾರ್ಯಕರ್ತರು ಬಾಲ್ಯ ವಿವಾಹದ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆದಿದೆ ಆದರೂ ಕೂಡ ಬಾಲ್ಯ ವಿವಾಹ ಮಾಡಲು ಮುಂದಾದರೆ ಅಕ್ಕ-ಪಕ್ಕದವರು ಸ್ಥಳೀಯರು ಸಹಕಾರ ನೀಡಿದಾಗ ಮಾತ್ರ ಬಾಲ್ಯ ವಿವಾಹ ತಪ್ಪಿಸಲು ಸಾಧ್ಯವಾಗುತ್ತದೆ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ ನಿಂಬೂರ, ಆರೋಗ್ಯ ಶಿಕ್ಷಣಾಧಿಕಾರಿ ನಿಂಗಮ್ಮ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ  ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನಪ್ರಾಸನ, ಹಾಗೂ ಮಕ್ಕಳ ಜನ್ಮದಿನ ಆಚರಿಸಲಾಯಿತು ಹಾಗೂ ಗರ್ಭಿಣಿ, ಬಾಣಂತಿಯರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಹೀನಾ ಕೌಸರ್ ಶಕೀಲ್ ಅಹಮದ್, ನಗರಸಭೆ ಸದಸ್ಯ ನಾಸೀರ್ ಕುಂಡಾಲೆ, ನಗರಸಭೆ ಮಾಜಿ ಅಧ್ಯಕ್ಷ ಅಬ್ದುಲ್ ಗಫಾರ್ ನಗನೂರಿ, ಬಿಆರ್ ಪಿ ಖಾದರ್ ಪಟೇಲ್, ಯಲ್ಲಪ್ಪ, ಆರೋಗ್ಯ ನಿರೀಕ್ಷಕ ಸುರೇಶ್ ಖಾದಿ, ಶಕೀಲ್ ಅಹಮದ್ ವೇದಿಕೆಯಲ್ಲಿದ್ದರು.ಕವಿತಾ ಬಡಿಗೇರಾ ಪ್ರಾರ್ಥನೆ ಗೀತೆ ಹಾಡಿದರು.ಸಿದ್ದಮ್ಮ ಜಾನಕಿ ಸ್ವಾಗತಿಸಿದರು.ಸಾವಿತ್ರಿ ಗಾಳಿ ನಿರೂಪಿಸಿದರು. ಶಶಿಕಲಾ ಗಾಳಿ ವಂದಿಸಿದರು. ಮೇಲ್ವಿಚಾರಕಿ ಪದ್ಮಾ ಡಿ.ನಾಯಕ, ಚಂದ್ರಲೀಲಾ ನಿಂಬೂರ, ಭಾಗಮ್ಮ ಡಿ.ಎಚ್.ಸತ್ಯಮ್ಮ,ಸುನೀತಾ ಡಿ.ಎಚ್ .ಭಾಗಮ್ಮ ,ಶಾಂತ ಯಡ್ರಾಮಿ, ಭೀಮಾಶಂಕರ ನಾಯಕ, ಏಜಾಹೈಮದ್,ಹರೀಶ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!