ರೈತರ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಿ; ರವಿಕುಮಾರ ನಾಯಕ ಭೈರಿಮಡ್ಡಿ
ಸುರಪುರ ಟೈಮ್ಸ್ ವಾರ್ತೆ
ಸುರಪುರ: ಸತತವಾಗಿ ಸುರಿದ ಮಳೆಯಿಂದ ರೈತ ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದ್ದು. ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.ಬೆಳೆ ಪರಿಹಾರ ನೀಡುವ ವಿಷಯದಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡಬಾರದು ಎಂದು ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ರೈತರು ಬೆಳೆದ ಬೆಳೆಗಳು ನೀರಲ್ಲಿ ನಿಂತು ಸಂಪೂರ್ಣ ಹಾಳಾಗಿ ಹೋಗಿದ್ದು .ರೈತನ ಬದುಕು ದುಸ್ಥಿತಿಗೆ ತಲುಪಿದೆ. ಅಲ್ಲದೆ ಮಳೆಯಿಂದ ಬೆಳೆ ಮತ್ತು ಮನೆ ಕಳೆದುಕೊಂಡ ಕುಟುಂಬಗಳಿಗೆ ಸಮಾನವಾಗಿ ಪರಿಗಣಿಸಿ ರೈತರಿಗೆ ಸಮರ್ಪಕ ಪರಿಹಾರ ಒದಗಿಸಬೇಕು ಎಂದರು. ಪರಿಹಾರ ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ಕೊಡದೆ ಪಾರದರ್ಶಕತೆಯಿಂದ ನಡೆಯಬೇಕು. ಬೆಳೆ ಮತ್ತು ಮನೆ ಕಳೆದುಕೊಂಡ ಕುಟುಂಬಗಳಿಗೆ ಸಮಾನವಾಗಿ ಪರಿಹಾರ ನೀಡಬೇಕೆಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ರವಿಕುಮಾರ ನಾಯಕ ಬೈರಿಮಡ್ಡಿ ಹಾಗೂ ಸುರಪುರ ತಾಲೂಕಾ ಅಧ್ಯಕ್ಷ ಗೋಪಾಲ ನಾಯಕ ಸತ್ಯಂಪೇಟ ಅವರು ಒತ್ತಾಯಿಸಿದ್ದಾರೆ.

