ಜಿಲ್ಲಾಧ್ಯಕ್ಷರ ಪದಗ್ರಹಣ ನಾಳೆ

ಸುರಪುರ ಟೈಮ್ಸ್ ವಾರ್ತೆ
ಸುರಪುರ : ಅಖಿಲ ಕರ್ನಾಟಕ ಕನ್ನಡ ಚಳುವಳಿ ಕೇಂದ್ರ ಸಮಿತಿ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಭೀಮು ನಾಯಕ ಮಲ್ಲಿಭಾವಿ ಅವರ ಪದಗ್ರಹಣ ಸಮಾರಂಭ ನಾಳೆ ಭಾನುವಾರ ನಗರದ ಟೈಲರ್ ಮಂಜಿಲ್ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10.30 ಗಂಟೆಗೆ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ವೃತ್ತದಿಂದ ಪ್ರವಾಸಿ ಮಂದಿರದವರೆಗೂ ಬೈಕ್ ರ‍್ಯಾಲಿ ನಡೆಯಲಿದೆ. ನಂತರ 11.3೦ ಗಂಟೆಗೆ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ಜರುಗಲಿದೆ. ಲಕ್ಷ್ಮೀಪುರ ಶ್ರೀ ಗಿರಿ ಸಂಸ್ಥಾನ ಮಠದ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮತ್ತು ರುಕ್ಮಾಪುರ ಶ್ರೀ ಗುರು ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಅಖಿಲ ಕರ್ನಾಟಕ ಕನ್ನಡ ಚಳುವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದೇವ ನಾರಾಯಣ ಕುಮಾರ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ಅಶೋಕ ಚೌಧರಿ, ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಕೊಟ್ರೇಶ ಚೌಧರಿ, ಗುರುಮಟಕಲ್ ಕಸಾಪ ಅಧ್ಯಕ್ಷ ಬಸವರೆಡ್ಡಿ ಎಂಟಿ ಪಲ್ಲಿ, ಶ್ರೀ ಮಹರ್ಷಿ ವಾಲ್ಮೀಕ ನಾಯಕ ಸಂಘದ ತಾಲೂಕು ಅಧ್ಯಕ್ಷ ಭೀಮನಗೌಡ ಲಕ್ಷ್ಮೀ ಹೆಮನೂರು, ಕರವೇ ತಾಲೂಕು ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ ಮುಖ್ಯ ಅತಿಥಿಗಳಾಗಿರುತ್ತಾರೆ. ಮುಖಂಡ ಯಲ್ಲಪ್ಪ ನಾಯಕ ಮಲ್ಲಿಬಾವಿ ಮತ್ತು ರಾಜಣ್ಣ ಅತಿಥಿಗಳಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!