ಭಾಗ್ಯಲಕ್ಷ್ಮಿ ಯೋಜನೆ ಮೊತ್ತ ಪಡೆಯಲು ಅರ್ಜಿ ಆಹ್ವಾನ
ಸುರಪುರ ಟೈಮ್ಸ್ ವಾರ್ತೆ
ಸುರಪುರ: ಭಾಗ್ಯಲಕ್ಷ್ಮಿ ಯೋಜನೆಯಡಿ 2006-07ನೇ ಸಾಲಿನಲ್ಲಿ ನೋಂದಣಿಯಾಗಿರುವ ಫಲಾನುಭವಿಗಳ ಮೊತ್ತವನ್ನು ಪಡೆಯಲು ತಂತ್ರಾಂಶದಲ್ಲಿ ಅಳವಡಿಸಲು ಅಕ್ಟೋಬರ್ 30 ಕಡೆ ದಿನ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲಸಾಬ ಪೀರಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2006-2007ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡು ಈಗಾಗಲೇ ಪರಿಪಕ್ವ ಮೊತ್ತವನ್ನು ಮಂಜೂರು ಮಾಡಲು ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದೆ. ಹೀಗಾಗಿ ಅಕ್ಟೋಬರ್-30ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಾಗಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

