ಕ್ರೀಡೆಯಲ್ಲಿ ರಾಜ್ಯ, ರಾಷ್ಟ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ಸಾಧನೆ ಮಾಡಬಹುದು:ಸಚಿವ ಶರಣಬಸಪ್ಪಗೌಡ ದರ್ಶನಾಪುರ

ಸುರಪುರ ಟೈಮ್ಸ್ ವಾರ್ತೆ

ಸುರಪುರ : ಪಾಠ ಎಷ್ಟು ಮುಖ್ಯವೋ ಅದೇ ರೀತಿ ಆಟವೂ ಮುಖ್ಯ. ಕ್ರೀಡೆಯಲ್ಲಿ ರಾಜ್ಯ, ರಾಷ್ಟ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ಸಾಧನೆ ಮಾಡಬಹುದಾಗಿದೆ. ಉತ್ತಮ ಕ್ರೀಡಾಪಟುಗಳಾಗಿ ದೇಶಕ್ಕೆ ರಾಜ್ಯಕ್ಕೆ ಊರಿನ ಕೀರ್ತಿ ತನ್ನಿ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ನಗರದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ಯಾದಗಿರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸುರಪುರ, ತಾಲೂಕು ದೈಹಿಕ ಶಿಕ್ಷಣ, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ 14/17 ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಬಾಲಕ-ಬಾಲಕಿಯರ ಖೋಖೋ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಓದಿನ ಜತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆಯಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳ ಉತ್ತಮ ಆರೋಗ್ಯಕ್ಕಾಗಿ ವ್ಯಾಯಾಮ ಹಾಗೂ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಮುಖ್ಯ. ಕ್ರೀಡೆಯಿಂದ ಆತ್ಮಸ್ಥೆöÊರ್ಯ ವೃದ್ಧಿಯಾಗುತ್ತದೆ ಹಾಗೂ ಕಲಿಕೆಗೂ ಪೂರಕವಾಗುತ್ತದೆ. ಕಾರಣ ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವದಿಂದ ಸಕ್ರಿಯವಾಗಿ ಭಾಗವಹಿಸಿ ಕ್ರೀಡಾಸ್ಪೂರ್ತಿ ಮೆರೆಯಬೇಕು. ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಗೆಲುವು ಸಾಧಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು. ಖೋ ಖೋ ರಾಷ್ಟೀಯ ಕ್ರೀಡೆಯಾಗಿದೆ. ಸರಕಾರಗಳು ದೇಶಿಯ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿವೆ ಎಂದರು.

ಕ್ರೀಡಾ ಸಚಿವರ ಜತೆಯಲ್ಲಿ ಮಾತನಾಡುವೆ
ಗ್ರಾಮೀಣ ಪ್ರದೇಶದಲ್ಲಿಯೂ ಕ್ರೀಡೆಗೆ ಉತ್ತೇಜನ ನೀಡಬೇಕು ಎಂದು ಸರಕಾರ ಆದೇಶಿಸಿದೆ. ತಹಸೀಲ್ದಾರ್ ಮತ್ತು ತಾಪಂ ಇಒ ಅವರು ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಟದ ಮೈದಾನ ನಿರ್ಮಿಸಿ ಕೊಟ್ಟರೆ ಕ್ರೀಡಾಪಟುಗಳಿಗೆ ಅನುಕೂಲವಾಗುತ್ತದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಕೂಟದಲ್ಲಿ ಬಿಲ್ಲುಗಾರಿಕೆ ಕ್ರೀಡೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕ್ರೀಡಾ ಸಚಿವರ ಜತೆಯಲ್ಲಿ ಮಾತನಾಡುವೆ ಎಂದರು.


ಅಧ್ಯಕ್ಷತೆ ವಹಿಸಿದ ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿ, ವಿದ್ಯಾರ್ಥಿಗಳಿಗೆ ಅಭ್ಯಾಸದ ಜತೆಗೆ ಆಟವೂ ಮುಖ್ಯ. ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಪ್ರತಿಯೊಬ್ಬ ಆಟಗಾರ ಸ್ಪರ್ಧಾ ಸ್ಪೂರ್ತಿಯಿಂದ ಪಂದ್ಯಾಟಗಳಲ್ಲಿ ಪಾಲ್ಗೊಳ್ಳಬೇಕು. ಸ್ಪರ್ಧೆಯಲ್ಲಿ ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿ ಊರಿಗೆ, ಶಾಲೆಗೆ ಕೀರ್ತಿ ತಂದು ರಾಜ್ಯ, ರಾಷ್ಟ ಮಟ್ಟದಲ್ಲಿ ಮಿಂಚಬೇಕು ಎಂದರು.

ಯಾದಗಿರಿ ಶಾಲಾ ಶಿಕ್ಷಣ ಇಲಾಖೆ ಉಪ ನಿದೇಶಕ ಚನ್ನಬಸಪ್ಪ ಮುಧೋಳ, ತಹಸೀಲ್ದಾರ್ ಹೆಚ್.ಎ.ಸರಕಾವಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಠ್ಠಲ ಯಾದವ, ನಗರಸಭೆ ಅಧ್ಯಕ್ಷೆ ಹೀನಾ ಕೌಸರ್ ಶಕೀಲ್ ಅಹ್ಮದ್, ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ (ತಾತಾ), ನಯೋಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ್, ಯಾದಗಿರಿ ಯೂಥ್ ಕಾಂಗ್ರೆಸ್ ಘಟಕ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ, ಪಿಐ ಉಮೇಶ.ಎಂ.ನಾಯಕ, ಪೌರಾಯುಕ್ತ ಬಸವರಾಜ ಟಣಕೇದಾರ್.
ದೈಹಿಕ ಶಿಕ್ಷಣಾಧಿಕಾರಿ ಮಲ್ಲಣ್ಣ ದೊಡ್ಡಮನಿ, ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ ನಿಂಬೂರ್, ಇಸಿಒ ಶರಣಬಸವ ಗಚ್ಚಿನಮನಿ, ಎನ್‌ಜಿಒ ಅಧ್ಯಕ್ಷ ರಾಮಕೃಷ್ಣ ಕಲಬುರಗಿ, ಸರಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಬಲಭೀಮನಾಯಕ ದೇಸಾಯಿ, ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಪ್ರಮುಖರಾದ ರಾಜಾ ವಾಸುದೇವ ನಾಯಕ, ರಾಜಾ ಸಂತೋಷ ನಾಯಕ, ರಾಜಾ ವಿಜಯಕುಮಾರ ನಾಯಕ, ರಾಜಾ ಸುಶಾಂತ ನಾಯಕ, ರಾಜಶೇಖರಗೌಡ ವಜ್ಜಲ್, ಗುಂಡಪ್ಪ ಸೊಲ್ಲಾಪುರ, ಬಾಪುಗೌಡ ಪಾಟೀಲ್, ಮಲ್ಲಣ್ಣ ಸಾಹು ಮುಧೋಳ, ಅಬ್ದುಲ್ ಗಫಾರ್, ಶೇಖ ಮಹಿಬೂಬ್ ಒಂಟಿ, ರಮೇಶ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ, ಸುಗೂರೇಶ ವಾರದ. ದೊಡ್ಡ ದೇಸಾಯಿ, ಮಾನಪ್ಪ ಸೂಗೂರು, ನಗರಸಭೆ ಮತ್ತು ನಗರ ಯೋಜನಾ ಪ್ರಾಧಿಕಾರದ ಸದಸ್ಯರು ವೇದಿಕೆಯಲ್ಲಿದ್ದರು.

ರೋಚಕ ಸೆಣಸಾಟದಿಂದ

ವಿಭಾಗ ಮಟ್ಟದ ಖೋ ಖೋ ಕ್ರೀಡಾಕೂಟದಲ್ಲಿ ಬಾಲಕ-ಬಾಲಕಿಯರ ಒಟ್ಟು 28 ತಂಡಗಳು ಭಾಗವಹಿಸಿವೆ. ಖೋ ಖೋ ಪಂದ್ಯಗಳು ಒಂದಕ್ಕಿಂತ ಒಂದು ರೋಚಕ ಸೆಣಸಾಟದಿಂದ ಕೂಡಿದ್ದವು. ಆಯೋಜಕರು ಆಟಗಾರರಿಗೆ ಉಪಹಾರ, ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಿದ್ದರು. ಬಿಇಒ ಯಲ್ಲಪ್ಪ ಕಾಡ್ಲೂರ ಸ್ವಾಗತಿಸಿದರು. ದೈಹಿಕ ಶಿಕ್ಷಕ ಶರಣಗೌಡ ಮಾಲಗತ್ತಿ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!