ಸುರಪುರ : ಗ್ರಾಮೀಣ ರಸ್ತೆ ಕಾಮಗಾರಿಗೆ ಚಾಲನೆ

ಸುರಪುರ ಟೈಮ್ಸ್ ವಾರ್ತೆ

ಸುರಪುರ :ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದ್ದು, ಹಂತ ಹಂತವಾಗಿ ಕಾಮಗಾರಿ ಕೈಗೊಂಡು ಕರ್ನಾಳ ಗ್ರಾಮದಿಂದ ಯಮನೂರು ಗ್ರಾಮಕ್ಕೆ ತೇರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಸಂಚಾರಕ್ಕೆ ಅಡಚಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸುರಪುರ ಮತಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರ ಮುತೂವರ್ಜಿಯಿಂದ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಇಂದು ಗ್ರಾಮಸ್ಥರು, ಮುಖಂಡರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಆದ್ಯತೆ ನೀಡಲಾಗಿದೆ. ಕಾಮಗಾರಿ ಗುಣಮಟ್ಟದ ಬಗ್ಗೆ ನಾವು ಸ್ಥಳೀಯರು ಕಾಳಜಿ ವಹಿಸಬೇಕು’ ಎಂದು ಕಾಂಗ್ರೆಸ್ ಮುಖಂಡ ಭೀಮನಗೌಡ ಲಕ್ಷ್ಮೀ ಯಮನೂರ ಹೇಳಿದರು.
ಈ ಸಂದರ್ಭದಲ್ಲಿ ಲೊಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಎಸ್ ಜಿ ಪಾಟೀಲ್,
ವೆಂಕೋಬ ಬಿರಾದಾರ್, ಶೇಸಪ್ಪ ಮಕಾಶಿ, ದೇವರಾಜ ನಾಮಲಿ, ವಾಸುದೇವ ಲಕ್ಷ್ಮೀ, ಬಾಬುಮಿಯ ಯಮನೂರು, ವೆಂಕಟೇಶ ಲಕ್ಷ್ಮೀ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!