ನ.8ಕ್ಕೆ ಕನಕದಾಸರ ಜಯಂತ್ಯುತ್ಸವ ಅದ್ಧೂರಿ ಆಚರಣೆ: ಹೆಚ್.ಎ.ಸರಕವಾಸ್

ಸುರಪುರ ಟೈಮ್ಸ್ ವಾರ್ತೆ
ಸುರಪುರ: ನ.8 ರಂದು ಭಕ್ತ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ಕಚೇರಿಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಸೀಲ್ದಾ‌ರ್ ಹೆಚ್.ಎ.ಸರಕವಾಸ್ ಹೇಳಿದರು.

ಇಲ್ಲಿಯ ತಹಸಿಲ್ ಕಚೇರಿಯಲ್ಲಿ ಗುರುವಾರ ಜರುಗಿದ ಕನಕ ಜಯಂತ್ಯುತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 8 ಗಂಟೆಗೆ ಎಲ್ಲ ಸರಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕನಕದಾಸರ ಭಾವಚಿತ್ರವಿಟ್ಟು ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಬೇಕು ಎಂದು ನಿರ್ದೇಶನ ನೀಡಿದರು. ನಂತರ ಬೆಳಗ್ಗೆ 10 ಗಂಟೆಗೆ ತಾಲೂಕಾಡಳಿತದ ವತಿಯಿಂದ ತಹಸಿಲ್ ಕಚೇರಿ ಆವರಣದಲ್ಲಿ ನಡೆಯುವ ಜಯಂತ್ಯುತ್ಸವದಲ್ಲಿ ಎಲ್ಲಾ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಎರಡನೆ ಶನಿವಾರ ಇರುವುದರಿಂದ ಯಾವುದಾರು ನೆಪ ಹೇಳಿ ಜಯಂತಿಯಿಂದ ತಪ್ಪಿಸಿಕೊಳ್ಳಬಾರದು. ಗೈರಾಗುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ನಗರಸಭೆ ಹತ್ತಿರದ ಡಾ. ಬಾಬಾ ಸಾಹೇಬ ಅಂಬೇಡ್ಕರ್ ವೃತ್ತದಿಂದ ಗಾಂಧಿ ಚೌಕ್, ಅರಮನೆ ಮಾರ್ಗವಾಗಿ ತಹಸೀಲ್ ಕಾರ್ಯಾಲಯದವರೆಗೆ ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆ ಆಯೋಜಿಸಲಾಗಿದೆ. ಸಮಾಜದ ಮುಖಂಡರು ವಿವಿಧ ಸಂಘಟನೆಗಳ ಮುಖಂಡರು ಜನಪ್ರತಿ ನಿಧಿಗಳು ಭಾಗವಹಿಸಲಿದ್ದಾರೆ. ನಂತರ ತಹಸೀಲ್ ಕಾರ್ಯಾಲಯದ ಆವರಣದಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗಿದ್ದು ಉಪನ್ಯಾಸಕರಿಂದ ಕನಕದಾಸರ ಕುರಿತು ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಒಂದು ದಿನ ಮುಂಚಿತವಾಗಿ ನಗರದ ಎಲ್ಲಾ ವೃತ್ತಗಳಲ್ಲಿ ಮರಮ್ ಹಾಕಿಸಿ ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಉಪಹಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ತಾಲೂಕು ಪಂಚಾಯಿತಿ ಇಒ ಬಸವರಾಜ ಸಜ್ಜನ್, ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ, ಎಇಇ ಹೆಚ್.ಡಿ.ಪಾಟೀಲ್, ಉಪ ಖಜಾನೆ ಅಧಿಕಾರಿ ಸಣ್ಣಕ್ಕೆಪ್ಪ ಕೊಂಡಿಕಾರ, ಪಿಐ ಉಮೇಶ ನಾಯಕ, ಉಪ ನೋಂದಣಾಧಿಕಾರಿ ಗುರುರಾಜ ಸಜ್ಜನ್, ದೈಹಿಕ ಶಿಕ್ಷಣಾಧಿಕಾರಿ ಮಲ್ಲಣ್ಣ ದೊಡ್ಡನಿ, ಬಿಸಿಎಂ ಅಧಿಕಾರಿ ಯಂಕಣ್ಣ ಟಣಕೇದಾರ, ಆರೋಗ್ಯ ನೈರ್ಮಲ್ಯಾಧಿಕಾರಿ ಗುರುಸ್ವಾಮಿ
ಮುಖಂಡರಾದ ಬೀರಲಿಂಗ ಬಾದ್ಯಾಪುರ, ಶಿವುರಾಯ ಕಾಡೂರ, ಸಿದ್ದು ತುಮಕೂರ, ಪರಮಣ್ಣ ಹಾಲಭಾವಿ, , ಕುರುಬ ಸಮಾಜದ ತಾಲೂಕು ಅಧ್ಯಕ್ಷ ಕಾಳಪ್ಪ ಕವಾತಿ, ಮುಖಂಡರಾದ ಮಲ್ಲು ದಂಡಿನ, ಕೃಷ್ಣ ಕವಾತಿ ಮಾತನಾಡಿ ಸಲಹೆ ಸೂಚನೆ ನೀಡಿದರು. ಭೀಮಣ್ಣ ಕೆಂಗೂರಿ, ಸಿದ್ರಾಮ ಎಲಿಗಾರ,ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!