ಗ್ಯಾರಂಟಿ ಯೋಜನೆಗಳ ಮಧ್ಯೆಯು 16 ನೇ ದಾಖಲೆ ಬಜೆಟ್ ಮಂಡಿಸಿದ ಸಿದ್ದರಾಮಯ್ಯ : ಮಲ್ಲಣ್ಣ ಐಕೂರ್
*ಸುರಪುರ ಟೈಮ್ಸ್ ವಾರ್ತೆ*

ಯಾದಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಈ ಬಾರಿಯ 16.ನೇ ಬಜೆಟ್ ಜನಪರ ಮತ್ತು ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ಯಾದಗಿರಿ ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಅವರು ನಗರದಲ್ಲಿ ಪತ್ರಿಕಾ ಹೇಳಿಕೆ
ಈ ಕುರಿತು ಪತ್ರಿಕ ಹೇಳಿಕೆ ನೀಡಿರುವ ಅವರು ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯನವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಕುರಿಗಳೇ ಲೆಕ್ಕ ಹಾಕಲು ಬರುವುದಿಲ್ಲ ಇವರೇನು ಬಜೆಟ್ ಮಂಡಿಸುತ್ತಾರೆ.
ಎಂದು ಕೆಲವರು ವ್ಯಂಗ್ಯವಾಡಿದ್ದರು .
ಅವರಿಗೆ ಪ್ರತ್ಯುತ್ತರ ನೀಡಿ ಸುಮಾರು 16 ಬಜೆಟ್ ಗಳ ಮಂಡನೆ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ ಎಂದರು.
ಈ ಬಾರಿಯೂ ಕಲ್ಯಾಣ ಕರ್ನಾಟಕಕ್ಕೆ ಉತ್ತಮವಾದ ಕೊಡುಗೆ ನೀಡಿದ್ದಾರೆ.
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೂ ಹೆಚ್ಚಿನ ಅನುದಾನ ನೀಡಿದ್ದು ಜೊತೆಗೆ ಶಿಕ್ಷಣ ಆರೋಗ್ಯ ಉದ್ಯೋಗ ಹೈನುಗಾರಿಕೆ ಸಹಕಾರಿ ಕೃಷಿ ಮೀನುಗಾರಿಕೆ ತೋಟಗಾರಿಕೆ ಕ್ಷೇತ್ರಕ್ಕೂ ಹೆಚ್ಚಿನ ಒತ್ತು ಕೊಟ್ಟಿದ್ದಾರೆ.
ಸರ್ವ ಸಮುದಾಯಗಳ ಅಭಿವೃದ್ಧಿ ಪರ ಬಜೆಟ್ ಇದಾಗಿದೆ ರೈತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಜಿಲ್ಲೆಗೆ ಸರಕಾರಿ ನರ್ಸಿಂಗ್ ಕಾಲೇಜ್ ಸ್ಥಾಪನೆ ಹಾಗೂ ಶಹಾಪುರದಲ್ಲಿ ಕ್ರೀಡಾ ವಸತಿ ನಿಲಯ ಮಂಜೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದೆ ಕಲಬುರ್ಗಿಯಲ್ಲಿ ನಿಮಾನ್ಸ್ ಆಸ್ಪತ್ರೆ ಮತ್ತು ರಾಯಚೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಮುಂದಾಗಿದ್ದು ಈ ಭಾಗದ ಬಡ ರೋಗಿಗಳಿಗೆ ಸಹಕಾರಿಯಾಗಲಿದೆ ಗ್ಯಾರಂಟಿ ಯೋಜನೆಗಳ ಮಧ್ಯೆಯು ಅತ್ಯುತ್ತಮವಾದ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಇದೊಂದು ಐತಿಹಾಸಿಕ ಬಜೆಟ್ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ತಿಳಿಸಿದ್ದಾರೆ.