ಕೋಮು ಗಲಭೆ ಸೃಷ್ಟಿಸುತ್ತಿರುವ RSS ಸಂಘಟನೆ ವಿರುದ್ಧ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
ಸುರಪುರ ಟೈಮ್ಸ್ ವಾರ್ತೆ
ಸುರಪುರ:ದೇಶದಲ್ಲಿ ಕೋಮುಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡಿ ಬ್ರಾಹ್ಮಣ್ಯವಾದಿ ಅಧಿಕಾರವನ್ನು ನಿರಂತರವಾಗಿ ಅನುಭವಿಸಲು ಆರ್ ಎಸ್ ಎಸ್ ಕುತಂತ್ರವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ತಾಲೂಕು ಸಮಿತಿ ವತಿಯಿಂದ ನಗರದ ತಹಸಿಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ ಮಾತನಾಡಿ, ಆರ್‌ಎಸ್‌ಎಸ್‌ನ ಸಂಘಟನೆಯು ಸಾಮಾಜಿಕ ವಿಭಜನೆ, ಅಸಮಾನತೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮೇಲೆ ನಿಯಂತ್ರಣ ಸಾಧಿಸುವ ಪ್ರಯತ್ನಗಳನ್ನು ಮಾಡುತ್ತಿದೆ ಹಾಗೂ ಸಂಘಟನೆಯು ಬ್ರಾಹ್ಮಣಿಕ ಮೂಲ ತತ್ವಗಳ ಆಧಾರದ ಮೇಲೆ ಕೆಲಸ ಮಾಡುತ್ತದೆ, ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯಗಳ ನಡುವೆ ವೈಷಮ್ಯವನ್ನು ಹುಟ್ಟಿಸುತ್ತದೆ. ಇತ್ತೀಚೆಗೆ ಆರ್.ಎಸ್.ಎಸ್ 100 ವರ್ಷ ಪೂರೈಸಿದೆ ಎಂದು ಕಾನೂನು ಬಾಹಿರವಾಗಿ ಸಂಭ್ರಮಾಚಾರಣೆ ಮಾಡಿದಕ್ಕೆ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ನಿಷೇಧಕ್ಕೆ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಅದಕ್ಕೆ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಅಂತವರನ್ನು ಬಂಧಿಸಿ ಕಾನೂನು ಪ್ರಕಾರ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದರು. ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಡಾ. ಬಿಆರ್ ಅಂಬೇಡ್ಕರ್ ಅವರ ಹೆಸರು ಇಡಬೇಕೆಂದು ಒತ್ತಾಯಿಸಿದರು. ನಂತರ ಮುಖ್ಯಮಂತ್ರಿ ಅವರಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಸಿಲ್ದಾರ್ ಮಲ್ಲಯ್ಯ ದಂಡು ಅವರ ಮೂಲಕ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶರಣಪ್ಪ ತಳವಾರಗೇರಾ, ಮಲ್ಲಿಕಾರ್ಜುನ್ ಹಾದಿಮನಿ, ಗೊಲ್ಲಾಳಪ್ಪ ಕಟ್ಟಿಮನಿ, ಪ್ರಕಾಶ್ ಕಟ್ಟಿಮನಿ, ಶರಣು ಅಂಬರಖೇಡ, ಲಾಲು ಚೌಹಾಣ್, ಕೆಂಚಪ್ಪ ಕಟ್ಟಿಮನಿ, ಹೊನ್ನಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.





