ಅಲ್ಪಸಂಖ್ಯಾತರ ಸಮುದಾಯದವರು ಇಲಾಖೆಯ ಯೋಜನೆಗಳ ಸದುಪಯೋಗಪಡಿಸಿಕೊಳ್ಳಿ ; ಗ್ಯಾನಪ್ಪ ಮೇಟಿ

ಸುರಪುರ : ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಲವಾರು ಯೋಜನೆಗಳನ್ನು ರೂಪಿಸಿದ್ದು ಈ ಯೋಜನೆಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಅಲ್ಪಸಂಖ್ಯಾತರ ತಾಲೂಕು ವಿಸ್ತರಣಾಧಿಕಾರಿ ಗ್ಯಾನಪ್ಪ ಮೇಟಿ ಹೇಳಿದರು.

ನಗರದ ರಂಗಂಪೇಟೆಯ ವಿವಿದೆಡೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಯೋಜನೆಗಳ ಕುರಿತು ಅಲ್ಪಸಂಖ್ಯಾತರ ಸಮುದಾಯದವರಿಗೆ ಜಾಗೃತಿ ಮೂಡಿಸಿಮಾತನಾಡಿದ ಅವರು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ವಿವಿಧ ವೃತ್ತಿಪರ ಕೋರ್ಸಗಳ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ವಿದೇಶಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ ಹಾಗೂ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಉತ್ತೇಜನ ನೀಡುವುದರ ಜೊತೆಗೆ ಆರ್ಥಿಕ ಹೊರೆಯನ್ನು ತಗ್ಗಿಸಬೇಕೆಂಬ ಉದ್ದೇಶದಿಂದ ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ 50 ಸಾವಿರ ನೀಡಲಾಗುವುದು. ಇನ್ನಿತರ ಎಲ್ಲ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಮುದಾಯದವರಿಗೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಮಹಮ್ಮದ್ ಗೌಸ್ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!