ಆಲಮಟ್ಟಿ-ನಾರಾಯಣಪುರ ಜಲಾಶಯಗಳ ನೀರಾವರಿ ಸಲಹಾ ಸಮಿತಿಯ ಸಭೆ ನಾಳೆ

ಸುರಪುರ ಟೈಮ್ಸ್ ವಾರ್ತೆ

ಸುರಪುರ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಆಲಮಟ್ಟಿ-ನಾರಾಯಣಪುರ ಜಲಾಶಯಗಳಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಕ್ಕೆ ಹಿಂಗಾರು ಹಂಗಾಮಿಗೆ ಕಾಲುವೆಗೆ ನೀರು ಹರಿಸಲು ದಿ. 12ರಂದು ಐಸಿಸಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಐಸಿಸಿ ಕಾರ್ಯದರ್ಶಿ ಹಾಗೂ ಮುಖ್ಯ ಅಭಿಯಂತರ ಪ್ರೇಮಸಿಂಗ ತಿಳಿಸಿದ್ದಾರೆ. ಕಳೆದ ದಿ. 5ರಂದು ನಡೆಯಬೇಕಾಗಿದ್ದ ಈ ಸಭೆ ಮಾಜಿ ಸಚಿವ ಹಾಗೂ ಶಾಸಕರಾಗಿದ್ದ ಹೆಚ್.ವಾಯ್. ಮೇಟಿಯವರ ನಿಧನಿಂದ ಮುಂದೂಡಲಾಗಿತ್ತು. ಇದೀಗ ಸಚಿವರು ಹಾಗೂ ಐಸಿಸಿ ಅಧ್ಯಕ್ಷ ಆರ್.ಬಿ. ತಿಮ್ಮಾಪೂರ ಅಧ್ಯಕ್ಷತೆಯಲ್ಲಿ ಅಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಮಧ್ಯಾಹ್ನ 3ಕ್ಕೆ ಸಭೆ ನಡೆಯಲಿದೆ. ಅಚ್ಚುಕಟ್ಟು ಪ್ರದೇಶದ ಸಚಿವರು, ಸಂಸದರು, ಶಾಸಕರು ಹಾಗೂ ವಲಯ ಮಟ್ಟದ ನೀರಾವರಿ ಅಧಿಕಾರಿಗಳೂ ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!