ಪೊಲೀಸ್ ಎಂದರೆ ಭಯವಲ್ಲ, ಭರವಸೆ: ಶಾಸಕ ರಾಜಾ ವೇಣುಗೋಪಾಲ ನಾಯಕ

ಸುರಪುರ ಟೈಮ್ಸ್ ವಾರ್ತೆ

ಸುರಪುರ:ಪೊಲೀಸ್‌ ಅಂದರೆ ಭಯ ಅಲ್ಲ ಅದು ಭರವಸೆ. ಜನರಿಗೆ ಭದ್ರತೆ ನೀಡಲು, ಕಾನೂನು ಸುವ್ಯವಸ್ಥೆ ಕಾಪಾಡಲು ಸದಾ ಸಿದ್ದವಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ಇಂದು ಸುರಪುರ ಪೊಲೀಸ್ ಠಾಣೆ ವತಿಯಿಂದ ದೇವಪುರ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮಸ್ಥರಿಗೆ ಪೊಲೀಸ್ ಇಲಾಖೆಯ ಹೊಸ ಯೋಜನೆ ಮನೆಮನೆಗೆ ಪೊಲೀಸ್ ಕಾರ್ಯಕ್ರಮದಲ್ಲಿ ಭಾಗಿ ಮಾತನಾಡಿದ ಅವರು ಮನೆ ಮನೆಗೆ ಪೊಲೀಸ್’ ನಿಮ್ಮ ರಕ್ಷಕರು, ನಿಮ್ಮ ಮನೆ ಬಾಗಿಲಿಗೆ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನು ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಸಹಾಯವಾಗಲಿದೆ ಪೊಲೀಸರು ಬಂದಾಗ ಜನರು ಕಷ್ಟಸುಖ ಹೇಳಬಹುದು. ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದರೆ ಮಾಹಿತಿ ನೀಡಬಹುದು. ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳನ್ನು ತಡೆಗಟ್ಟುವುದು, ಅಪರಾಧಗಳನ್ನು ಪತ್ತೆ ಹಚ್ಚುವ ಉದ್ದೇಶದೊಂದಿಗೆ ಈ ಯೋಜನೆ  ನಮ್ಮ ಸರ್ಕಾರ ಹಮ್ಮಿಕೊಂಡಿರುವ ಸಂತಸವಾಗಿದೆ ಎಂದು ಶಾಸಕರು ತಿಳಿಸಿದರು. 

ಬೀಟ್ ಸಿಬ್ಬಂದಿಯಾದ ದಯಾನಂದ ಪೊಲೀಸ್ ರವರು ಗ್ರಾಮಸ್ಥರಿಗೆ ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ತಿಳಿಸಿದ್ದು ಯಾವುದೇ ತುರ್ತು ಸಂದರ್ಭದಲ್ಲಿ 112 ಗೆ ಕರೆ ಮಾಡಿ ಸೈಬರ್ ಕ್ರೈಂ ಸಹಾಯವಾಣಿ ಸಂಖ್ಯೆ 1930 ಗೆ ಕರೆ ಮಾಡಿ ಎಂದು ತಿಳಿಸಿದರು .ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ವೃಂದ ಆರೋಗ್ಯ ಇಲಾಖೆಯ ಸಿಬ್ಬಂದಿ ವೃಂದ ಹಾಗೂ ಆಶಾ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!