ಶೋಷಿತರ ಪರ ಹೋರಾಟ ಸಂಘಟನೆಗಳ ಒಕ್ಕೂಟದಿಂದಬಲವಂತದ ಸಾಲ ವಸೂಲಾತಿಗೆ ಪ್ರತಿಭಟನೆ
ಸುರಪುರ ಟೈಮ್ಸ್ ವಾರ್ತೆ
ಸುರಪುರ: ಗ್ರಾಹಕರಿಂದ ಬಲವಂತದ ಸಾಲ ವಸೂಲಾತಿಯನ್ನು ನಿಲ್ಲಿಸಬೇಕು. ಅರ್ಹ ಫಲಾನುಭವಿಗಳಿಗೆ ಸಾಲ ವಿತರಿಸಬೇಕು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶೋಷಿತರ ಪರ ಹೋರಾಟ ಸಂಘಟನೆಗಳ ಒಕ್ಕೂಟದ ವತಿಯಿಂದ ರಂಗಂಪೇಟೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಬ್ಯಾಂಕಿನಿಂದ ಗ್ರಾಹಕರಿಗೆ ಬಲವಂತದ ಸಾಲ ವಸೂಲಾತಿ ನಡೆಯುತ್ತಿದೆ. ಕೂಡಲೇ ಇದನ್ನು ನಿಲ್ಲಿಸಬೇಕು. ಸಾಲ ಮರು ಪಾವತಿಸಿದವರಿಗೆ ಮತ್ತೇ ಸಾಲ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳಿಗೆ ಆಗ್ರಹಿಸಲಾಯಿತು. ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಬ್ಯಾಂಕ್ ಅಧಿಕಾರಿಗಳಿಗೆ ಸಲ್ಲಿಸಲಾಯಿತು. ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ನೇತೃತ್ವ ವಹಿಸಿದ್ದರು. ತಾಲೂಕಾ ಅಧ್ಯಕ್ಷ ನಾಗರಾಜ ದರಬಾರಿ, ದೇವಪ್ಪ
ರತ್ನಾಳ, ಶಿವು ಹಸನಾಪುರ, ಅಂಬ್ರೇಶ ಹಸನಾಪುರ ಈ ಸಂದರ್ಭದಲ್ಲಿ ಇತರರಿದ್ದರು.
