ನಗನೂರ ಸರ್ಕಾರಿ ಶಾಲೆ ಹಾಗೂ ಗ್ರಾಮ ಪಂಚಾಯಿತಿಗೆ ಜಿ.ಪಂ. ಸಿಇಓ ಲವೀಶ ಒರಡಿಯಾ ಭೇಟಿ, ಪರಿಶೀಲನೆ

ಸುರಪುರ ಟೈಮ್ಸ್ ವಾರ್ತೆ

ಸುರಪುರ :-ನಗನೂರ ಗ್ರಾಮ ಪಂಚಾಯಿತಿಗೆ ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಒರಡಿಯಾ ಅವರು ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸರಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದರು. ದವಸ ಧಾನ್ಯಗಳು ಶುಚಿಗೊಳಿಸಿ ಮಕ್ಕಳಿಗೆ ಬಿಸಿಯೂಟ ನೀಡುವಂತೆ ಸೂಚಿಸಿದರು. ಕೂಸಿನ ಮನೆಗೆ ಭೇಟಿ ನೀಡಿ, 6 ತಿಂಗಳಿಂದ ಹಿಡಿದು ಮೂರು ವರ್ಷದೊಳಗಿನ ಮಕ್ಕಳ ಹಾರೈಕೆ ಮಾಡಬೇಕು ಎಂದು ಸೂಚಿಸಿದರು. ಒಂದನೇ ವಾರ್ಡಿನ ಅಂಗನಾಡಿ ಕೇಂದ್ರಕ್ಕೆ ಭೇಟಿ ನೀಡಿ ಕಟ್ಟಡ ಮತ್ತು ಶೌಚಾಲಯ ಪರಿಶೀಲಿಸಿ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಸರಿಯಾಗಿ ವಿತರಿಸುವಂತೆ ಸೂಚಿಸಿದರು.
ಗ್ರಾಮದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಆಸ್ಪತ್ರೆ, ಅಂಗನವಾಡಿ, ಪ್ರಾಥಮಿಕ ಶಾಲೆ. ಪ್ರೌಢ ಶಾಲೆಗೆ, ಸ್ವಸಾಯ ಗುಂಪಿನವರು ನಡೆಸುತ್ತಿರುವ ರೊಟ್ಟಿ ಕೇಂದ್ರಕ್ಕೆ ಭೇಟಿ ನೀಡಿದರು. ಭೂಸೇನಾ ನಿಗಮದ ವತಿಯಿಂದ ನಡೆಸುತ್ತಿರುವ ಕಾಮಗಾರಿಗಳ ಗುಣಮಟ್ಟ ಕಾಪಾಡಿ ನಿಗದಿತ ಅವಧಿಯಲ್ಲಿ ಮುಗಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರ ಸಮಸ್ಯೆಗಳನ್ನ ಸ್ಥಳದಲ್ಲೆ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಕ ಅಧಿಕಾರಿ ಬಸವರಾಜ ಸಜ್ಜನ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಡಿವಾಳಪ್ಪ ಎಸ್. ತಳವಾರ, ಕೆಆರ್‌ಡಿಎಲ್ ಸಹಾಯಕ ಅಭಿಯಂತರ ಶಶಾಂಕ ನಾಯಕ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಸಂಜಯ ಚಂದಾ, ತಾಲ್ಲೂಕು ಸಂಯೋಜಕ ಶಿವಯೋಗಿ ಹಿರೇಮಠ, ಕರ ವಸೂಲಿಗಾರ ಶರಣಪ್ಪ ಹವಲ್ದಾರ, ಡಿಇಒ ಬಸವರಾಜ ನಾಯಕ, ಗ್ರಾಪಂ ಸದಸ್ಯರಾದ ವಿಶ್ವನಾಥ ಹವಲ್ದಾರ, ರಾಜು ಉಪ್ಪಾರ, ಶರಣಪ್ಪ ಗಾಯಕವಾಡ ಸೇರಿದಂತೆ ಗ್ರಾಪಂ ಸದಸ್ಯರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!