ಬಿಜಾಸಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ವತಿಯಿಂದಬಡ ಫಲಾನುಭವಿಗೆ “ವಾತ್ಸಲ್ಯ” ಮನೆ ಹಸ್ತಾಂತರ
ಸುರಪುರ ಟೈಮ್ಸ್ ವಾರ್ತೆ
ಸುರಪುರ : ತಾಲೂಕಿನ ಬಿಜಾಸಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗ್ರಾಮದ ಮಸಾಶನ ಫಲಾನುಭವಿಯಾದ ಹನುಮಂತಿ ಅವರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಜರುಗಿತು.
ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ರಾಜಾ ಸಂತೋಷ ನಾಯಕ, ಜಿಲ್ಲಾ ಜನ ಜಾಗೃತಿ ವೇದಿಕೆ ಕೋಶಾಧಿಕಾರಿ ಸೂಗುರೇಶ ವಾರದ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ನಿಂಗಪ್ಪ ನಾಯಕ ಬಿಜಾಸಪುರ, ಗ್ರಾಮದ ಗಣ್ಯರಾದ ಸಂಗರೆಡ್ಡಿ ಪೊಲೀಸ್ ಪಾಟೀಲ್, ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಮಡಿವಾಳಪ್ಪ ಸೇರಿ ಇತರರಿದ್ದರು.
ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ನಾಗೇಶ್ ಎನ್‌ಪಿ ಮಾತನಾಡಿ, ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸಮಾಜದಲ್ಲಿರುವ ಅತಿ ದುರ್ಬಲ ಮತ್ತು ಅಸಹಾಯಕ ಸ್ಥಿತಿಯಲ್ಲಿರುವ ಕುಟುಂಬಗಳನ್ನು ಗುರುತಿಸಿ ಅವರ ಜೀವನ ನಿರ್ವಹಣೆಗೆ ಬೇಕಾದ ಮಾಸಾಶನ ಹಾಗೂ ಅಗತ್ಯಕ್ಕೆ ಅನುಕೂಲವಾಗುವಂತೆ ವಾತ್ಸಲ್ಯ ಕಿಟ್‌ಗಳನ್ನು ಕೊಡುವುದರೊಂದಿಗೆ ಸೂರು ಇಲ್ಲದವರಿಗೆ ಸ್ವಂತ ಸೂರು ನಿರ್ಮಾಣ ಮಾಡಿ ಕೊಡುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಪ್ರಮುಖರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಬಡ, ನಿರ್ಗತಿಕ ಮಹಿಳೆಯರ ಬದುಕಿನಲ್ಲಿ ಆತ್ಮಸ್ಥೆöÊರ್ಯ ತುಂಬ ಕೆಲಸ ಮಾಡುತ್ತಿದೆ. ಅದೇ ರೀತಿಯಲ್ಲಿ ಇಂದು ಅನೇಕ ಸಾಮಾಜಿಕ ಕಾರ್ಯಕ್ರಮಗಳು ಸಂಸ್ಥೆಯಿAದ ನಡೆಯುತ್ತಿವೆ. ಸಮಾಜದ ಬಗ್ಗೆ ಅಪಾರ ಕಾಳಜಿ ವಹಿಸಿ ಸಂಸ್ಥೆ ಮಾಡುವ ಕಾರ್ಯಗಳು ಪ್ರೇರಣೆ ಮತ್ತು ಮಾದರಿಯಾಗಿವೆ ಎಂದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅನಿತಾ ಬಿರಾದಾರ್, ವಲಯದ ಮೇಲ್ವಿಚಾರಕರು, ಊರಿನ ಪ್ರಮುಖರು, ಒಕ್ಕೂಟದ ಅಧ್ಯಕ್ಷರು, ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.




ಶ್ಲಾಘನೀಯ ಕಾರ್ಯ
ಬಡ, ನಿರ್ಗತಿಕರಿಗೆ ಮನೆ ನಿರ್ಮಿಸುವ ಜತೆಗೆ ಮಾಸಾಶನ ಕೊಟ್ಟು ಪ್ರೋತ್ಸಾಹ ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಮಾದರಿ. ಪೂಜ್ಯ ಡಾ.ವಿರೇಂದ್ರ ಹೆಗ್ಗಡೆ ಮತ್ತು ಡಾ.ಹೇಮಾವತಿ ವಿ.ಹೆಗ್ಗಡೆಯವರ ಜನಪರ ಕಾರ್ಯಗಳ ಶ್ಲಾಘನೀಯ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಕೋಶಾಧಿಕಾರಿ ಸೂಗೂರೇಶ ವಾರದ ಹೇಳಿದರು.
