ಸುರಪುರ ನಗರ ಸಭೆ ಬಜೆಟ್ ರಚನೆ ಸಭೆ 17ಕ್ಕೆಸುರಪುರ
ಸುರಪುರ ಟೈಮ್ಸ್ ವಾರ್ತೆ
ಸುರಪುರ : ಇಲ್ಲಿಯ ನಗರಸಭೆಯ 2025-26ನೇ ಸಾಲಿನ ಬಜೆಟ್ ರಚನೆ ಬಗ್ಗೆ ಸಲಹೆ ಸೂಚನೆ ನೀಡಲು ಮಾ.17 ರಂದು ಮಧ್ಯಾಹ್ನ 3 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಬಜೆಟ್ ತಯಾರಿಕೆಯ ಎರಡನೇ ಸುತ್ತಿನ ಪ್ರಮುಖರ ಸಭೆಯನ್ನು ನಗರಸಭೆ ಅಧ್ಯಕ್ಷೆ ಹೀನಾ ಕೌಸರ್ ಶಕೀಲ್ ಅಹ್ಮದ್ ಖುರೇಷಿ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಸಭೆಯಲ್ಲಿ ನಾಗರಿಕರು, ನೋಂದಾಯಿತ ಸಂಘ-ಸಂಸ್ಥೆಗಳ ಸದಸ್ಯರು, ಜನಪ್ರತಿನಿಧಿಗಳು ಮತ್ತು ವಾಣಿಜ್ಯ ಹಾಗೂ ಕೈಗಾರಿಕಾ ಸಂಘಗಳ ಸದಸ್ಯರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ನಗರಸಭೆ ಪೌರಾಯುಕ್ತ ಕೆ. ಜೀವನಕುಮಾರ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.