ಪೋಲಿಯೋ ಮುಕ್ತ ಸಮಾಜ ನಮ್ಮೆಲ್ಲರ ಗುರಿ;ಹಣಮಂತರಾಯ ದೊರೆ
ಸುರಪುರ ಟೈಮ್ಸ್ ವಾರ್ತೆ
ಸುರಪುರ;ಜವಾಬ್ದಾರಿಯುತವಾಗಿ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಜೋಡಿಸುವುದು ಅತ್ಯಗತ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮಂತರಾಯ ದೊರೆ ಅಭಿಪ್ರಾಯಪಟ್ಟರು.
ಸಮೀಪದ ಚೌಡೇಶ್ವರಿ ಗ್ರಾಮದಲ್ಲಿ ಗ್ರಾಮದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ನಿಮಿತ್ತ ಭಾನುವಾರ ಪುಟಾಣಿ ಮಕ್ಕಳಿಗೆ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಕ್ಕಳನ್ನು ಪೋಲಿಯೋ ರೋಗದಿಂದ ರಕ್ಷಿಸುವ ಉದ್ದೇಶದಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ತಾಲೂಕಿನ ಚೌಡೇಶ್ವರಿ ಗ್ರಾಮದಲ್ಲಿ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬಸ್ ನಿಲ್ದಾಣ, ಅಂಗನವಾಡಿ ಕೇಂದ್ರಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಲಸಿಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.
ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಲಸಿಕೆ ಕೇಂದ್ರಗಳಿಗೆ ಕರೆತಂದು ಎರಡು ಹನಿ ಹಾಕಿಸಬೇಕು ಎಂದು ಆರೋಗ್ಯ ಅಧಿಕಾರಿ ಆನಂದ ಮನವಿ ಮಾಡಿದ್ದಾರೆ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವೆಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹನುಮಂತರಾಯ ಹಾಗೂ ಗ್ರಾಮ ಪಂಚಾಯತ್ ಸದಸ್ಯ ದೇವೇಂದ್ರಪ್ಪ ಪ್ರಾಥಮಿಕ ಸಂರಕ್ಷಣಾಧಿಕಾರಿ ರತ್ನ ಎಸ್ ಎಂ ಹಾಗೂ ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಶಿಕ್ಷಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಚಾಲನೆ ನೀಡಿದರು.


