ಏ.10ರ ವರೆಗೂ ಕಾಲುವೆಗೆ ನೀರು ಹರಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕ ರಾಜಾ ವೇಣುಗೋಪಾಲ್ ನಾಯಕ ಮನವಿ
ಸುರಪುರ ಟೈಮ್ಸ್ ವಾರ್ತೆ
ಸುರಪುರ;ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸುರಪುರ ಮತಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಅವರು ಮನವಿಯನ್ನು ಸಲ್ಲಿಸಿದರು.ರೈತರು ಬಿತ್ತನೆ ಮಾಡಿದ ಭತ್ತ ಸಜ್ಜಿ ಬೆಳೆಗಳಿಗೆ ನೀರಿನ ಅವಶ್ಯಕತೆ ಇದ್ದು ಕೂಡಲೇ ಏಪ್ರಿಲ್ ಹತ್ತರವರೆಗೆ ನೀರು ಹರಿಸುವಂತೆ ಮನವಿಯನ್ನು ಸಲ್ಲಿಸಿದರು ಮನವಿಗೆ ಸ್ಪಂದಿಸಿದ ಮಾನ್ಯ ಉಪ ಮುಖ್ಯಮಂತ್ರಿಗಳು ಮಾತನಾಡಿ ಅತಿ ಶೀಘ್ರದಲ್ಲಿ ಅಧಿಕಾರಿಗಳ ಸಭೆ ಕರೆದು ರೈತರ ಹಿತ ಕಾಯುವ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಸಂದರ್ಭದಲ್ಲಿ ಸುರಪುರ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದ್ದರು

