ಭವಿಷ್ಯದ ಎದುರಾಗುವ ಸವಾಲುಗಳಿಗೆ ಸಿದ್ಧರಾಗುವಂತೆ ವಿದ್ಯಾರ್ಥಿಗಳಿಗೆ ಕರೆ;ಅಮರ್ ಡೇನಿಯಲ್ ಗೇಬ್ರಿಯನ್
ಸುರಪುರ ಟೈಮ್ಸ್ ವಾರ್ತೆ
ಸುರಪುರ;ವಿದ್ಯಾರ್ಥಿಗಳು ಬದಲಾಗುತ್ತಿರುವ ಜಗತ್ತಿನ ಭವಿಷ್ಯದ ಸವಾಲುಗಳಿಗೆ ಸಿದ್ಧರಾಗಬೇಕು ಎಂದು ಕೋರಿದರು. ಕೇವಲ ಅಂಕಗಳಿಗಷ್ಟೇ ಸೀಮಿತವಾಗದೆ ಕೌಶಲ್ಯಾಧಾರಿತ ಶಿಕ್ಷಣ, ತಂತ್ರಜ್ಞಾನ ಜ್ಞಾನ, ಸಂವಹನ ಕೌಶಲ್ಯ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಮುಂದೆ ಸಾಗುವಂತೆ ಅವರು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಕಠಿಣ ಪರಿಶ್ರಮ, ಸಮಯಪಾಲನೆ ಮತ್ತು ಗುರಿನಿರ್ಧಾರವೇ ಯಶಸ್ಸಿನ ಕೀಲಿಕೈ ಎಂದು ಅಮರ್ ಡೇನಿಯಲ್ ಗೇಬ್ರಿಯನ್ ಹೇಳಿದರು.
ಅವರು ಶುಕ್ರವಾರ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ, ವೀರಪ್ಪ ನಿಷ್ಕ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ‘ಅರಿವು ದಾರಿ’ ಉದ್ಯೋಗಶೀಲತಾ, ಮೌಲ್ಯಮಾಪನ ಮತ್ತು ಕೃತಕ ಬುದ್ಧಿಮತ್ತೆ ಹಾಗೂ ಸಂದರ್ಶನ ತಯಾರಿ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ಆತ್ಮಾವಲೋಕನ ವಿದ್ಯಾರ್ಥಿಗಳು ಮೊದಲು ತಮ್ಮ ಸಾಮರ್ಥ್ಯ ಮತ್ತು ಆಸಕ್ತಿಗಳನ್ನು ಗುರುತಿಸಿಕೊಳ್ಳುವ ಮೂಲಕ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಅಭಿಕ್ಷಮ್ಯತೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಕೇವಲ ಪದವಿ ಸಾಕಾಗುವುದಿಲ್ಲ, ಬದಲಿಗೆ ತಾರ್ಕಿಕ ಮತ್ತು ವಿಶ್ಲೇಷಣಾತ್ಮಕ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಅತ್ಯಗತ್ಯ ಎಂದರು. ವೃತ್ತಿಜೀವನದ ಸಿದ್ದತೆ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಭವಿಷ್ಯದ ಸವಾಲುಗಳಿಗೆ ಸಿದ್ಧರಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ಎಸ್ ನಿಷ್ಕ್ರಿ ವಹಿಸಿದ್ದರು. ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಈ ಎರಡು ದಿನಗಳ ಕಾರ್ಯಕ್ರಮವು ಇಂದು ಮತ್ತು ನಾಳೆ ನಡೆಯಲಿದೆ ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಭವಿಷ್ಯದ ಉದ್ಯೋಗಾವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವ ಗುರಿಯನ್ನು ಹೊಂದಿದೆ ಆದಕಾರಣ ಕಾರ್ಯಾಗಾರ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು ಹೇಳಿದರು.
ಈ ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಹಿರಿಯ
ಪ್ರಾಚಾರ್ಯ ಡಾ. ಶರಣಬಸಪ್ಪ ಸಾಲಿ ಯವರು ಅತಿಥಿಗಳನ್ನು ಸ್ವಾಗತಿಸಿ ಸನ್ಮಾನಿಸಿದರು, ತರಬೇತಿ ಮತ್ತು ಉದ್ಯೋಗಾಧಿಕಾರಿ, ಪ್ರೋ ಮಂಜುನಾಥ ಯಳವಾರ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪ್ರೊ. ಪೂಜಾ ಹತ್ತರಕಿ ನಿರೂಪಿಸಿ ವಂದಿಸಿದರು. ವಿದ್ಯಾರ್ಥಿನಿ ಕು.ರಾಧಿಕಾ ಮುಖ್ಯ ಅತಿಥಿಗಳ ಬಗ್ಗೆ ಪರಿಚಯ ನೀಡಿದರು.





