“ಸಾಹಿತ್ಯ ರತ್ನ “ಪ್ರಶಸ್ತಿಗೆ ಬಿಂದು ಧರ್ಮಣ್ಣ ಆಯ್ಕೆ
ಸುರಪುರ ಟೈಮ್ಸ್ ವಾರ್ತೆ
ಸುರಪುರ :ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದಿರಾ ಚಾರಿಟಬಲ್ ಅಂಡ್ ಎಜುಕೇಶನ್ ಟ್ರಸ್ಟ್ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಸೇವೆಯನ್ನು ಪರಿಗಣಿಸಿ ಕೊಡಮಾಡುವ ‘ಸಾಹಿತ್ಯ ರತ್ನ’ ಪ್ರಶಸ್ತಿಗೆ ಕನ್ನಡ ಭಾಷೆಯ ಶಿಕ್ಷಕಿ ಬಿಂದು ಧರ್ಮಣ್ಣ ಹುಲಿಕರ್ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಇದೇ ಜ.25 ರಂದು ಕೊಟ್ಟೂರಿನ ಇಂದು ಪದವಿ ಪೂರ್ವ ಕಾಲೇಜಿನಲ್ಲಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ನ ಕಾರ್ಯದರ್ಶಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

