ಕಾಗಿನೆಲೆ ಮಹಾಸಂಸ್ಥಾನ ತಿಂಥಣಿ ಬ್ರಿಡ್ಜ್ ಕನಕ ಗುರುಪೀಠದ ಸಿದ್ದರಾಮಾನಂದಪುರಿ ಶ್ರೀಗಳ ನಿಧನಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕರಿಂದ ಸಂತಾಪ

ಸುರಪುರ ಟೈಮ್ಸ್ ವಾರ್ತೆ

ಸುರಪುರ:ಕಾಗಿನೆಲೆ ಮಹಾಸಂಸ್ಥಾನ ತಿಂಥಣಿ ಬ್ರಿಡ್ಜ್ ಕನಕ ಗುರುಪೀಠದ ಸಿದ್ದರಾಮಾನಂದಪುರಿ ಶ್ರೀಗಳ ನಿಧನವು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪೂಜ್ಯ ಶ್ರೀಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬಿತ್ತಿದ ಮಹಾತ್ಮರಾಗಿದ್ದು, ಅವರ ಮಾರ್ಗದರ್ಶನ ಅನೇಕ ಭಕ್ತರಿಗೆ ಬೆಳಕಿನ ದಾರಿಯಾಗಿತ್ತು ಎಂದು ಅವರು ಹೇಳಿದರು.
ಪೂಜ್ಯ ಶ್ರೀಗಳ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಹಾಗೂ ಶೋಕಸಂತಪ್ತ ಭಕ್ತರು ಮತ್ತು ಶಿಷ್ಯರಿಗೆ ಈ ದುಃಖವನ್ನು ಸಹಿಸುವ ಶಕ್ತಿ ದೊರಕಲಿ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಪ್ರಾರ್ಥಿಸಿದರು.

Leave a Reply

Your email address will not be published. Required fields are marked *

error: Content is protected !!