ಕಲ್ಬುರ್ಗಿ ವಿಭಾಗ ವತಿಯಿಂದ ಜ.17, 18 ರಂದು ದಲಿತ ಸಂಘರ್ಷ ಸಮಿತಿ ವಿಭಾಗೀಯ ಮಟ್ಟದ ಅಧ್ಯಯನ ಶಿಬಿರ : ಮಾಳಪ್ಪ ಕಿರದಳ್ಳಿ

ಸುರಪುರ ಟೈಮ್ಸ್ ವಾರ್ತೆ
ಸುರಪುರ;ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಲಬುರ್ಗಿ ವಿಭಾಗದ ವತಿಯಿಂದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿರುವ ಬುದ್ಧ ವಿಹಾರದಲ್ಲಿ ಇದೇ ಜನವರಿ 17 ಮತ್ತು 18 ಎರಡು ದಿನಗಳ ಕಾಲ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಲಬುರ್ಗಿ ವಿಭಾಗೀಯ ಮಟ್ಟದ ಎಲ್ಲಾ ಜಿಲ್ಲೆ ಮತ್ತು ತಾಲೂಕಿನ ಪದಾಧಿಕಾರಿಗಳಿಗಾಗಿ ಅಧ್ಯಯನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಯಾದಗಿರಿ ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ ತಿಳಿಸಿದ್ದಾರೆ.

ನಮ್ಮ ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಅವರ ನೇತೃತ್ವದಲ್ಲಿ ನಡೆಯುವ ಅಧ್ಯಯನ ಶಿಬಿರದಲ್ಲಿ ನಾಡಿನ ಅನೇಕ ಜನ ಚಿಂತಕರು ಭಾಗವಹಿಸಿ ತಮ್ಮ ವಿಚಾರ ಮಂಡಿಸಲಿದ್ದಾರೆ.ಎರಡು ದಿನಗಳ ಕಾಲ ವಿವಿಧ ವಿಷಯಗಳ ಕುರಿತು ವಿಚಾರಗೋಷ್ಠಿಗಳು ನಡೆಯಲಿವೆ. ಆದ್ದರಿಂದ ಈ ಅಧ್ಯಯನ ಶಿಬಿರದಲ್ಲಿ ಯಾದಗಿರಿ ಜಿಲ್ಲೆಯ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲೆ ಮತ್ತು ಎಲ್ಲಾ ತಾಲೂಕಿನ ಪದಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!