ದೇಶದ ಸ್ವಾತಂತ್ರ್ಯ ಹೋರಾಟದ ಅಮರ ನಾಯಕ ನೇತಾಜಿ; ಬಲಭೀಮನಾಯಕ ದೇಸಾಯಿ
ಸುರಪುರ ಟೈಮ್ಸ್ ವಾರ್ತೆ
ಸುರಪುರ;ದೇಶದ ಸ್ವಾತಂತ್ರ್ಯ ಹೋರಾಟದ ಅಮರ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯನ್ನು ನಗರದ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನಲ್ಲಿ ಇಂದು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ನೇತಾಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಪ್ರಾಂಶುಪಾಲ ಬಲಭೀಮನಾಯಕ ದೇಸಾಯಿ ನೇತಾಜಿಯವರು ತೋರಿದ ಧೈರ್ಯ, ತ್ಯಾಗ ಮತ್ತು ಅಜೇಯ ಮನೋಭಾವನೆ ಇಂದು ವಿದ್ಯಾರ್ಥಿಗಳಿಗೆ ದೊಡ್ಡ ಪ್ರೇರಣೆಯಾಗಿದೆ ಎಂದು ಹೇಳಿದರು. “ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ” ಎಂಬ ಅವರ ಘೋಷಣೆ ದೇಶಭಕ್ತಿಯ ಸಂಕೇತವಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ನೇತಾಜಿಯವರ ಜೀವನ, ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಹಾಗೂ ಅವರ ಆದರ್ಶಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಯುವಜನತೆ ರಾಷ್ಟ್ರಭಕ್ತಿ, ಶಿಸ್ತು ಮತ್ತು ಸಮಾಜಸೇವೆಯ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಹನುಮಂತರಾಯ ದೊಡ್ಡಮನಿ,ಡಾ.ಕೃಷ್ಣಪ್ಪ ,ಹನುಮಂತರಾಯ ಪಾಟಿಲ್,ಶಶಿಕುಮಾರ್ , ವೆಂಕಟೇಶ್ ,ಮಾರುತಿ,ದೇವು ಹೆಬ್ಬಾಳ್ ,ಹಣಮಂತ ಸಿಂಗೆ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.






