ಬಾದ್ಯಾಪೂರ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ
ಸುರಪುರ ಟೈಮ್ಸ್ ವಾರ್ತೆ
ಸುರಪುರ;2023–24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಯೋಜನೆಯಡಿ ಸುರಪುರ ತಾಲೂಕಿನ ಬಾದ್ಯಾಪೂರ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನೂತನ ಗ್ರಾಮ ಪಂಚಾಯತ್ ಕಟ್ಟಡವನ್ನು ಇಂದು ಶನಿವಾರ ಅದ್ದೂರಿಯಾಗಿ ಶಾಸಕ ರಾಜಾ ವೇಣುಗೋಪಾಲ ನಾಯಕರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮ ಪಂಚಾಯತ್ ಕಟ್ಟಡವು ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಸುಗಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಗ್ರಾಮಸ್ಥರಿಗೆ ಒಂದೇ ಸೂರಿನಡಿ ಆಡಳಿತಾತ್ಮಕ ಸೌಲಭ್ಯಗಳು ಲಭ್ಯವಾಗಲಿದ್ದು, ಗ್ರಾಮೀಣ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಗ್ಯಾರಂಟಿ ಯೋಜನೆ ಜಿಲ್ಲೆ ಉಪಾಧ್ಯಕ್ಷರುಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ತಾಲೂಕು ಅಧಿಕಾರಿಗಳು ಮತ್ತು ಗ್ಯಾರಂಟಿ ಯೋಜನೆ ತಾಲೂಕ್ ಅಧ್ಯಕ್ಷರು ಮತ್ತು ಊರಿನ ಎಲ್ಲಾ ಗಣ್ಯಮಾನ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.





