ಪ್ರಥಮ ಪಿಯುಸಿ ಪ್ರವೇಶಕ್ಕೆ ಟ್ಯಾಲೆಂಟ್ ಪರೀಕ್ಷೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ; ಬೂದೆಪ್ಪ ಎನ್ .ಶೆಟ್ಟಿ
ಸುರಪುರ ಟೈಮ್ಸ್ ವಾರ್ತೆ
ಸುರಪುರ: ನಗರದ ವೆಂಕಟಾಪುರ ಬಳಿ ಇರುವ ಶ್ರೀಮತಿ ಎನ್ಎನ್ ಶೆಟ್ಟಿ, ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ (1st PUC) ಪ್ರವೇಶ ಪಡೆಯಲು ಆಸಕ್ತ ವಿದ್ಯಾರ್ಥಿಗಳಿಗಾಗಿ ಟ್ಯಾಲೆಂಟ್ ಪರೀಕ್ಷೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಬೂದೆಪ್ಪ ಎನ್ .ಶೆಟ್ಟಿ ತಿಳಿಸಿದ್ದಾರೆ ಈ ಪರೀಕ್ಷೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿರುವ ಹಾಗೂ ಉತ್ತೀರ್ಣರಾದ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ವಿಜ್ಞಾನ ವಿಭಾಗಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳ ಜ್ಞಾನ, ತಾರ್ಕಿಕ ಸಾಮರ್ಥ್ಯ ಹಾಗೂ ಸಾಮಾನ್ಯ ಅರಿವನ್ನು ಮೌಲ್ಯಮಾಪನ ಮಾಡಲಾಗುತ್ತದೆ.
ಟ್ಯಾಲೆಂಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರವೇಶದಲ್ಲಿ ಆದ್ಯತೆ, ಶುಲ್ಕ ರಿಯಾಯಿತಿ ಹಾಗೂ ಸ್ಕಾಲರ್‌ಶಿಪ್ ಸೌಲಭ್ಯ ಒದಗಿಸಲಾಗುತ್ತದೆ. ಪರೀಕ್ಷೆಯಲ್ಲಿ ಕನ್ನಡ, ಇಂಗ್ಲಿಷ್, ಗಣಿತ, ಸಾಮಾನ್ಯ ಜ್ಞಾನ ಹಾಗೂ ತಾರ್ಕಿಕ ಸಾಮರ್ಥ್ಯ ವಿಷಯಗಳಿಂದ ಪ್ರಶ್ನೆಗಳು ಇರಲಿವೆ.
ಆಸಕ್ತ ವಿದ್ಯಾರ್ಥಿಗಳು 25.01.2026 ರಂದು 12 .00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಇರುತ್ತದೆ.ಪರೀಕ್ಷೆಯ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಎಂದು ಹೇಳಿದರು ಹೆಚ್ಚಿನ ಮಾಹಿತಿಗಾಗಿ 9449986298 ಸಂಪರ್ಕಿಸುವಂತೆ ತಿಳಿಸಲಾಗಿದೆ.



