ರಾಷ್ಟ್ರಭಕ್ತಿಯ ಜ್ವಾಲೆ ಸಂಗೊಳ್ಳಿ ರಾಯಣ್ಣ: ಸುರಪುರ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಮನ

ಸುರಪುರ ಟೈಮ್ಸ್ ವಾರ್ತೆ
ಸುರಪುರ:ಅಪ್ರತಿಮ ದೇಶಭಕ್ತ ಹಾಗೂ ಕಿತ್ತೂರು ರಾಣಿ ಚೆನ್ನಮ್ಮರ ಬಲಗೈ ಬಂಟರಾಗಿ ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸಂಸ್ಮರಣೆಯ ಅಂಗವಾಗಿ ಇಂದು ಸುರಪುರ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕರವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
ರಾಯಣ್ಣ ಅವರ ಅಪಾರ ದೇಶಭಕ್ತಿ, ಅಚಲ ಧೈರ್ಯ ಮತ್ತು ತ್ಯಾಗ ಮನೋಭಾವ ಇಂದಿನ ಯುವಪೀಳಿಗೆಗೆ ಸದಾ ಪ್ರೇರಣೆಯಾಗಬೇಕು. ಅವರ ಹೋರಾಟ ಹಾಗೂ ತ್ಯಾಗವನ್ನು ಸ್ಮರಿಸುವ ಮೂಲಕ ರಾಷ್ಟ್ರಭಕ್ತಿಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು ಕ್ರಾಂತಿವೀರರಿಗೆ ನಮನ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!