ಫೆ.1ರಂದು ಮಡಿವಾಳ ಮಾಚಿದೇವರ ಜಯಂತಿ;ಎಚ್.ಎ.ಸರಕವಾಸ್
ಸುರಪುರ ಟೈಮ್ಸ್ ವಾರ್ತೆ
ಸುರಪುರ : ತಾಲೂಕಿನಲ್ಲಿ ಫೆ.1 ರಂದು ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಗುವುದು. ಸರಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು ಎಂದು ತಹಸೀಲ್ದಾರ್ ಹುಸೇನಸಾಬ್ ಸರಕವಾಸ್ ಹೇಳಿದರು.
ಇಲ್ಲಿಯ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಮಡಿವಾಳ ಮಾಚಿದೇವರ ಜಯಂತ್ಯುತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಮಡಿವಾಳ ಮಾಚಿದೇವರ ಭಾವಚಿತ್ರವಿಟ್ಟು ಪುಷ್ಪ ನಮನ ಸಲ್ಲಿಸಬೇಕು ಎಂದು ತಿಳಿಸಿದರು.
ತಹಸಿಲ್ ಕಚೇರಿಯಲ್ಲಿ ತಾಲೂಕಾಡಳಿತದ ವತಿಯಿಂದ ಜಯಂತಿ ಆಚರಿಸಲಾಗುವುದು. ಮಡಿವಾಳ ಮಾಚಿದೇವರ ಕುರಿತು ಉಪನ್ಯಾಸ ಇರುತ್ತದೆ. ಎಲ್ಲ ಇಲಾಖೆಯ ಅಧಿಕಾರಿಗಳು ಜಯಂತಿಯಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಸೂಚಿಸಿದರು.ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಮಡಿವಾಳ ಸಮಾಜದ ಮುಖಂಡರಾದ ಸಾಯಬಣ್ಣ ಮಡಿವಾಳ, ಚಂದ್ರಶೇಖರ ಗೋಗಿ, ಬಸವರಾಜ ಚಂದನಕೇರಿ, ಬಸವರಾಜ.ಹೆಚ್, ಮಲ್ಲಿಕಾರ್ಜುನ ಮಡಿವಾಳ, ಸಂತೋಷ ಮಡಿವಾಳ, ಭರತ್ ಮಡಿವಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.




