ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ
ಸುರಪುರ ಟೈಮ್ಸ್ ವಾರ್ತೆ
ಸುರಪುರ;ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪುರಸ್ಕೃತ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳ ಲಾಭ ನಿಗದಿತ ಅವಧಿಯಲ್ಲಿ ಗ್ರಾಮೀಣ ಜನರಿಗೆ ತಲುಪಿಸುವ ಮೂಲಕ ಪ್ರಗತಿ ಸಾಧಿಸುವಂತೆ ಸಂಬಕಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಹೇಳಿದರು.
ಅವರು ತಾಲೂಕ ಪಂಚಾಯತ್ ಸುರಪೂರ ಸಭಾಂಗಣದಲ್ಲಿ ಸುರಪೂರ, ಹುಣಸಗಿ ಮತ್ತು ಶಹಾಪೂರ ತಾಲೂಕಿನ ಗ್ರಾಮ ಪಂಚಾಯತಿಯಿಂದ ಅನುಷ್ಠಾನವಾಗುವ ವಿವಿಧ ಯೋಜನೆಗಳಾದ NREGA, SBM-G, JJM, 15th FC, NRLM, PR Issue’s, ವಸತಿ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನೆಡಸಿ ಮಾತನಾಡಿದ ಅವರು ಯೋಜನೆಗಳ ಪ್ರಗತಿಗೆ ಸ್ಥಳೀಯ ಮಟ್ಟದ ಅಧಿಕಾರಿ, ಸಿಬ್ಬಂದಿಗಳ ಪಾತ್ರ ಬಹುಮುಖ್ಯವಾಗಿರುತ್ತದೆ. ಎಲ್ಲ ಅಧಿಕಾರಿ-ಸಿಬ್ಬಂದಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ನಿಗದಿತ ಸಮಯದಲ್ಲಿ ಇಲಾಖೆಯ ಎಲ್ಲ ಯೋಜನೆಗಳ ಪ್ರಗತಿ ಸಾಧಿಸುವಂತೆ ಅವರು ಹೇಳಿದರು.ಈ ಸಂದರ್ಭದಲ್ಲಿ ಯಾದಗಿರಿ ಜಿಪಂ ಮಾನ್ಯ ಉಪ ಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು, ಶಹಾಪೂರ, ಹುಣಸಗಿ ಸುರಪುರದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ,ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, RWS & PRED ಯವರು ಉಪಸ್ಥಿತರಿದ್ದರು.
WASH team,DPM, ಯೋಜನೆವಾರು ಸಿಬ್ಬಂದಿ ಭಾಗಿಯಾಗಿದ್ದರು
AD’s, PDO,s ನರೇಗಾ ಯೋಜನೆ TC, TMIS, TIEC,ವಸತಿ ಸಂಯೋಜಕರು,ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

