ಭಾರತೀಯ ದಲಿತ ಪ್ಯಾಂಥರ್ ರಾಜ್ಯ ಸಮಿತಿ ವತಿಯಿಂದ ಫೆ.3ಕ್ಕೆ ಬೆಂಗಳೂರಿನಲ್ಲಿ ವಿಚಾರ ಸಂಕಿರಣ;ಆದಪ್ಪ ಹೊಸಮನಿ
ಸುರಪುರ ಟೈಮ್ಸ್ ವಾರ್ತೆ
ಸುರಪುರ : ಭಾರತೀಯ ದಲಿತ ಪ್ಯಾಂಥರ್ ರಾಜ್ಯ ಸಮಿತಿ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ ರಸ್ತೆಯ ಗಾಂಧಿ ಭವನದಲ್ಲಿ ಫೆ.3 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಭೀಮಾ ಕೋರೆಗಾಂವ್ ವಿಜಯೋತ್ಸವ ಮತ್ತು ದಲಿತರ ಮುಂದಿರುವ ಸವಾಲುಗಳು ಕುರಿತಾದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಆದಪ್ಪ ಹೊಸಮನಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿಚಾರ ಸಂಕಿರಣ ಉದ್ಘಾಟಿಸುವರು. ಪೂಜ್ಯ ಜ್ಞಾನ ಪ್ರಕಾಶ ಸ್ವಾಮೀಜಿ ಮತ್ತು ಪೂಜ್ಯ ವರಜ್ಯೋತಿ ಬಂತೇಜಿ ಸಾನ್ನಿಧ್ಯ ವಹಿಸುವರು. ಚಿಂತಕ, ಹಿರಿಯ ಪತ್ರಕರ್ತ ದಿನೇಶ್ ಅಮೀನಮಟ್ಟು ವಿಚಾರ ಮಂಡನೆ ಮಾಡುವರು. ಭಾರತೀಯ ದಲಿತ ಪ್ಯಾಂಥರ್‌ನ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ ಇಂಗನಕಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ್, ಎಂಎಲ್ಸಿ ತಿಪ್ಪಣಪ್ಪ ಕಮಕನೂರ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ದಲಿತ ಮುಖಂಡ ಬಸವರಾಜ ಕೌತಾಳ, ದತ್ತಾತ್ರೇಯ ಇಕ್ಕಳಕಿ ಕಲಬುರಗಿ ಮುಖ್ಯ ಅತಿಥಿಗಳಾಗಿರುತ್ತಾರೆ.ಕಲಬುರಗಿ ಮಹಾನಗರ ಪಾಲಿಕೆ ಮಹಾ ಪೌರರಾದ ವರ್ಷಾ ರಾಜೀವ್ ಜಾನೆ, ಪ್ರಮುಖರಾದ ಮೋಹನ್ ಕುಮಾರ ದಾನಪ್ಪ , ಸುರೇಶ್ ಮೆಂಗನ್, ಉಮೇಶ್ ಕುಲಕರ್ಣಿ, ಅಶೋಕ್ ವೀರ ನಾಯಕ್ ಕಲಬುರಗಿ, ಪಬ್ಲಿಕ್ ಪ್ರಾಸಿಕ್ಯೂಟರ್ ಹೈಯಾಳಪ್ಪ ಬಳಬಟ್ಟಿ, ಪರಶುರಾಮ ರಾಯಚೂರು ವಿಶೇಷ ಆಹ್ವಾನಿತರಾಗಿರುತ್ತಾರೆ. ದಲಿತ ಪ್ಯಾಂಥರ್‌ನ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಅತಿಥಿಗಳಾಗಿರುತ್ತಾರೆ. ಖ್ಯಾತ ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಕ್ರಾಂತಿ ಗೀತೆ ಹಾಡಲಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಮಿತಿಯವರು, ನಾಗರಿಕರು ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.







