ಪ್ರತಿಭಾ ಕಾರಂಜಿಯಲ್ಲಿ ಮಿಂಚಿದ ತಕ್ಷಶೀಲಾ ಅಂತಾರಾಷ್ಟ್ರೀಯ ಶಾಲೆ ವಿದ್ಯಾರ್ಥಿ ರಂಜಿತ


ಸುರಪುರ ಟೈಮ್ಸ್ ವಾರ್ತೆ

ಸುರಪುರ:ಯಾದಗಿರಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025–26 ಕಾರ್ಯಕ್ರಮದಲ್ಲಿ ಸುರಪುರದ ಪ್ರತಿಷ್ಠಿತ ತಕ್ಷಶೀಲಾ ಅಂತಾರಾಷ್ಟ್ರೀಯ ಶಾಲೆಯ 8ನೇ ತರಗತಿ ವಿದ್ಯಾರ್ಥಿ ರಂಜಿತ ಅವರು ಚರ್ಚಾ ಸ್ಪರ್ಧೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಜಿಲ್ಲಾ ಮಟ್ಟದ ಈ ಸ್ಪರ್ಧೆಯಲ್ಲಿ ತಮ್ಮ ಸ್ಪಷ್ಟವಾದ ವಿಚಾರ ಪ್ರಸ್ತುತಿ ಹಾಗೂ ಆತ್ಮವಿಶ್ವಾಸಪೂರ್ಣ ವಾದದಿಂದ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದ ರಂಜಿತ ಅವರ ಸಾಧನೆಯು ಶಾಲೆಗೆ ಮಾತ್ರವಲ್ಲದೆ ಜಿಲ್ಲೆಯಿಗೂ ಹೆಮ್ಮೆಯ ವಿಷಯವಾಗಿದೆ.
ಈ ಸಾಧನೆಯ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷಿ ಅಂಬಿಕಾ ಎಂ. ಯನಗುಂಟಿ, ಮುಖ್ಯಗುರು ರಾಕೇಶ್ ನಯರ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿಯನ್ನು ಅಭಿನಂದಿಸಿ, ಮುಂದಿನ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿ ಆಯ್ಕೆಯಾಗಲಿ ಎಂದು ಶುಭ ಹಾರೈಸಿದರು.

Leave a Reply

Your email address will not be published. Required fields are marked *

error: Content is protected !!