ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳಿಸುವಂತೆ ಸೂಚಿಸಿದ – ಜಿಪಂ ಸಿಇಓ..!!

ಸುರಪುರ ಟೈಮ್ಸ್ ವಾರ್ತೆ
ಕೆಂಭಾವಿ : ಪಟ್ಟದ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಹಾಗೂ ಸಮುದಾಯ ಆಸ್ಪತ್ರೆಗೆ ಜಿಲ್ಲಾ ಪಂ. ಸಿಇಓ ಅವರು ಭೇಟಿ ನೀಡಿ ಕುಂದು ಕೊರತೆಗಳನ್ನು ವಿಚಾರಿಸಿದರು.ಮಂಗಳವಾರ ಜಿಲ್ಲಾ ಪಂ ಸಿಇಓ ಲವೀಶ್ ವರಡಿಯಾ ಮುಖ್ಯಕಾರ್ಯನಿರ್ವಾಹಣ ಅಧಿಕಾರಿ
ಅವರು ಪಟ್ಟಣಕ್ಕೆ ಧೀಡಿರನೆ ಭೇಟಿ ನೀಡಿದ ಅವರು ಮೊದಲಿಗೆ ಸಮುದಾಯ ಆಸ್ಪತ್ರೆಗೆ ಆಗಮಿಸಿದ ಅವರು ಆಸ್ಪತ್ರೆಯಲ್ಲಿನ ಮೂಲಭೂತ ಸೌಕರ್ಯಗಳನ್ನು ಪಲಿಸಿಲಿದರು.
ನಂತರ ಪಟ್ಟಣದ ಮೋರಾರ್ಜಿ ವಸತಿ ಶಾಲೆಗೆ ಭೇಟಿನೀಡಿದ ಅವರು ವಿಧ್ಯಾರ್ಥಿಗಳಿಗೆ ದೊರಕುವ ಮೂಲಭೂತ ಸೌಕರ್ಯಗಳನ್ನು ಪರಿಸಿಲಿಸಿದ ಅವರು , ನಂತರ ವಿಧ್ಯಾರ್ಥಿಗಳೊಡನೆ ಸಂವಾದ ನಡೆಸಿದರು ಇನ್ನೂ ಕೆಲವೆ ದಿನಗಳಲ್ಲಿ ಎಸ್.ಎಸ್.ಎಲ್.ಸಿ ಪರಿಕ್ಷೇಗಳು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಚೆನ್ನಾಗಿ ವಿಧ್ಯಾಭ್ಯಾಸ ಮಾಡುವಂತೆ ವಿಧ್ಯಾರ್ಥಿಗಳಿಗೆ ಸೂಚಿಸಿದ ಅವರು , ಈ ಬಾರಿ ನಡೆಯುವ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆಯುವಂತೆ ಹೇಳಿದ ಅವರು , ಕಲಿಯುವ ಸಮಯದಲ್ಲಿ ವಿಧ್ಯಾರ್ಥಿಗಳು ಯಾವುದೇರೀತಿಯ ದುಷ್ಚಟಗಳಿಗೆ ಬಲಿಯಾಗದೇ ಏಕಾಗ್ರತೆಯಿಂದ ಓದುವುದರ ಜೊತೆಗೆ ಉತ್ತಮ ಅಂಕವನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ವಿಧ್ಯಾರ್ಥಿಗಳಿಗೆ ತಿಳಿಸಿದ ಅವರು ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ  ಇಓ ಬಸವರಾಜ ಸಜ್ಜನ,ಶಾಲೆಯ ಮುಖ್ಯ ಶಿಕ್ಷಕ ಯಲ್ಲಪ್ಪ ಕನ್ನೂರ , ಭೀಮಾಬಾಯಿ ಬಿರಾದರ , ಸಿ.ಆರ್.ಪಿ. ಶ್ರೀಶೈಲ ಪಾಸೋಡಿ , ಕೆಂಭಾವಿ ಪೋಲಿಸ್ ಠಾಣೆಯ ಪಿ.ಎಸ್.ಐ ಅಮೋಜ್ ಕಾಂಬಳೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!