ಪತ್ರಕರ್ತ ನಾಗರಾಜರಿಗೆ ಸನ್ಮಾನಿಸಿ ಬೀಳ್ಕೋಡಿಗೆ|ಪತ್ರಕರ್ತರು ಧ್ವನಿಯಿಲ್ಲದವರ ಪರ ನಿಲ್ಲಬೇಕು;ಮಲ್ಲಪ್ಪ ಸಂಕೀನ್‌

ಸುರಪುರ ಟೈಮ್ಸ್ ವಾರ್ತೆ

ಯಾದಗಿರಿ: ಪತ್ರಕರ್ತರು ಸಮಾಜದಲ್ಲಿ ಧ್ವನಿ‌ ಇಲ್ಲದವರ ಪರವಾಗಿ ನಿಂತಾಗ ಮಾತ್ರ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್‌ ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಕರ್ತ ‌ನಾಗರಾಜ‌ ಮಗದುಮ್ ಅವರ‌ ಬೀಳ್ಕೋಡಿಗೆ ಸಮಾರಂಭದಲ್ಲಿ ಮಾತನಾಡಿದರು.
ಜನರ ಮನಸ್ಸಿನಲ್ಲಿ ಉಳಿಯುವ ಕಾರ್ಯ ಮಾಡಬೇಕಿದೆ. ಪತ್ರಕರ್ತರ ಮೇಲೆ ಜನಸಾಮಾನ್ಯರು ಹೆಚ್ಚಿನ ರೀತಿಯಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದರು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಕೆಲಸ ಮಾಡುವ ಜವಾಬ್ದಾರಿ ಇದೆ. ಇದನ್ನು ಸಮರ್ಥವಾಗಿ ನಿಭಾಯಿಸಿದಾಗ ಬದಲಾವಣೆ ಕಾಣಲು ಸಾಧ್ಯವಿದೆ ಎಂದರು.
ಪತ್ರಕರ್ತ ನಾಗರಾಜ ಮಗದುಮ್ ಅವರು ಕಳೆದ ಮೂರು ವರ್ಷಗಳ ಕಾಲ ಜಿಲ್ಲೆಯಲ್ಲಿ ಜನಪರವಾದ ಕೆಲಸ ಮಾಡಿದ್ದಾರೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಲಿಂಗೇರಿ ಮಾತನಾಡಿ, ವೃತ್ತಿಯಲ್ಲಿ ಘನತೆ ಎತ್ತಿ ಹಿಡಿಯುವುದು ನಮ್ಮಲ್ಲರ ಜವಾಬ್ದಾರಿ ಆಗಿದೆ ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿ‌ ಮಾತನಾಡಿದ ಪತ್ರಕರ್ತ ನಾಗರಾಜ ಮಗದುಮ್ ಅವರು, ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಪ್ರತಿಯೊಬ್ಬರ ಸಹಕಾರ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಪತ್ರಕರ್ತರಾದ ಗಣೇಶ್ ಪಾಟೀಲ್ , ಲಕ್ಷ್ಮೀಕಾಂತ ಕುಲಕರ್ಣಿ, ಮಹೇಶ್ ಗಣೇರ್, ನಾಗರಾಜಗೌಡ ಬಿಳ್ಹಾರ, ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ ಮಾತನಾಡಿದರು.
ಮಲ್ಲೇಶ್ ಕುರಕುಂದಿ ಸೇರಿದಂತೆ ಇನ್ನಿತರರಿದ್ದರು. ಪತ್ರಕರ್ತ‌ ನರಸಪ್ಪ ನಾರಾಯಣೋರ್ ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *

error: Content is protected !!