ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ NSS ಶಿಬಿರ ಸಹಕಾರಿ;ರಾಘವೇಂದ್ರ

ಸುರಪುರ ಟೈಮ್ಸ್ ವಾರ್ತೆ

ಸುರಪುರ:NSS ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಮನೋಭಾವ ಬೆಳೆಸುವುದರ ಜೊತೆಗೆ ಶಿಸ್ತು, ಜವಾಬ್ದಾರಿತನ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಮೂಲಕ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗುತ್ತವೆ ಎಂದು ರತ್ತಾಳ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ರಾಘವೇಂದ್ರ
ಹೇಳಿದರು
ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ನಡೆಯುತ್ತಿರುವ ಮೈಲಾರಲಿಂಗೇಶ್ವರ ಸ್ನಾತಕೋತ್ತರ ಮಹಾವಿದ್ಯಾಲಯ ಹಾಗೂ ಪ್ರಿಯದರ್ಶಿನಿ ಪದವಿ ಮಹಾವಿದ್ಯಾಲಯ ರಂಗಂಪೇಟ ವತಿಯಿಂದ 2025–26ನೇ ಸಾಲಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವನ್ನುಉದ್ಘಾಟಿಸಿ ಮಾತನಾಡಿದರು.
ಪ್ರಸ್ತಾವಿಕವಾಗಿ NSS ಅಧಿಕಾರಿ ಮರೆಪ್ಪ ಎಸ್. ಪೂಜಾರಿ, ಎನ್‌ಎಸ್‌ಎಸ್ ಒಂದು ಶಿಸ್ತನ್ನು ಬೆಳೆಸುವ ವೇದಿಕೆಯಾಗಿದೆ. ಶ್ರಮದಾನ, ಚಿಂತನಾ ಮಂಥನ, ಸಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಯುತ್ತದೆ. ಜಾತಿಭೇದವಿಲ್ಲದೆ ಸಹಬಾಳ್ವೆಯ ಮನೋಭಾವದಿಂದ ನಡೆಯುವ ಈ ಶಿಬಿರದಲ್ಲಿ ಭಾಗವಹಿಸಿದಾಗ ಮಾತ್ರ ಅದರ ಮಹತ್ವ ಅರಿವಾಗುತ್ತದೆ ಎಂದು ತಿಳಿಸಿದರು.


ಮುಖ್ಯ ಅತಿಥಿಯಾಗಿ ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಿ ಸಣ್ಣ ಮರೆಪ್ಪ ರತ್ತಾಳ ಭಾಗವಹಿಸಿದ್ದರು. ಅತಿಥಿಗಳಾಗಿ ಹಿರಿಯ ಮುಖಂಡರಾದ ಆನಂದ ಗುಡ್ಡಕಾಯಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಲಾರಲಿಂಗೇಶ್ವರ ಸ್ನಾತಕೋತ್ತರ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಎಂ. ಕುಲಕರ್ಣಿ ವಹಿಸಿ, ಎನ್‌ಎಸ್‌ಎಸ್ ಶಿಬಿರದ ಮಹತ್ವದ ಕುರಿತು ಮಾತನಾಡಿದರು.
ಪ್ರಿಯದರ್ಶಿನಿ ಪಿಯು ಕಾಲೇಜಿನ ಪ್ರಾಂಶುಪಾಲ ಆದಿಲ್ ಇರ್ಷೇದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿಗಳಾದ ರಮೇಶ್ ಟಣಿಕೆದಾರ, ಹಿರುಗುರಾಜ್ ಬಿಲ್ಲವ, ಬಿ.ಜಿ. ನಾಯಕ, ಭರತ್, ಶರಣು, ಮಹೇಶ್ ಗಂಜಿ, ನಾಗರತ್ನಾ ಸೇರಿದಂತೆ ಉಪನ್ಯಾಸಕರು ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಮಂಜುನಾಥ ನಿರೂಪಿಸಿದರು. ಶಿವು ಸ್ವಾಗತಿಸಿದರು. ನಿಂಗಣ್ಣ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು. ರಮೇಶ್ ಟಣಿಕೆದಾರ ವಂದನಾರ್ಪಣೆ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!