ಜನಗಣತಿ ಕಾರ್ಯದಿಂದ ವಿಶೇಷ ಪ್ರಕರಣದ ನೌಕರರಿಗೆ ವಿನಾಯಿತಿ ಕೋರಿಕೆ|ತಹಸೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಂಘಗಳಿಂದ ಜಂಟಿ ಮನವಿ
ಸುರಪುರ ಟೈಮ್ಸ್ ವಾರ್ತೆ
ಸುರಪುರ:ಜನಗಣತಿ ಕಾರ್ಯದಲ್ಲಿ ವಿಶೇಷ ಪ್ರಕರಣಗಳ ನೌಕರರು ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ವಿನಾಯಿತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸುರಪುರ ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸುರಪುರ ಘಟಕದ ವತಿಯಿಂದ ಬುಧವಾರ ಮಾನ್ಯ ತಹಸೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಭೇಟಿ ಮಾಡಿ ಜಂಟಿಯಾಗಿ ಮನವಿ ಸಲ್ಲಿಸಲಾಯಿತು.
ಪ್ರೌಢಶಾಲಾ ಶಿಕ್ಷಕರಿಗೆ ಮುಂದಿನ ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಸೇರಿದಂತೆ ವಿವಿಧ ಶೈಕ್ಷಣಿಕ ಕಾರ್ಯಗಳು ಇರುವ ಹಿನ್ನೆಲೆಯಲ್ಲಿ ಜನಗಣತಿ ಕಾರ್ಯವನ್ನು ಒಂದೇ ಸಮಯದಲ್ಲಿ ನಿರ್ವಹಿಸಲು ತೊಂದರೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಿವೃತ್ತಿ ಹಂತದಲ್ಲಿರುವವರು ಹಾಗೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವಂತಹ ವಿಶೇಷ ಪ್ರಕರಣಗಳ ನೌಕರರಿಗೆ ಜನಗಣತಿ ಕಾರ್ಯದಿಂದ ವಿನಾಯಿತಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಎನ್‌ಜಿಒ ಅಧ್ಯಕ್ಷರಾದ ರಾಮಕೃಷ್ಣ ಕಲಬುರ್ಗಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಖಾದರ್ ಪಟೇಲ್, ಎನ್‌ಜಿಒ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಗೋನಾಲ, ಪ್ರೌಢಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೆಟಗಿಮಠ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ಸೋಮರೆಡ್ಡಿ ಮಂಗಿಹಾಳ, ಪ್ರೌಢಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಮಹೇಶ್ ಹುಜರಾತಿ, ಎನ್‌ಜಿಒ ಸದಸ್ಯರಾದ ಮಾಳಪ್ಪ ಹುಲ್ಲಿಕೇರಾ, ಲಕ್ಷ್ಮಣ, ದುರುಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.


