ಸುರಪುರ ನಗರದಲ್ಲಿ ಅನಧಿಕೃತ ಗ್ಯಾಸ್ ಬಳಕೆ ಮೇಲೆ ಕಟ್ಟುನಿಟ್ಟಿನ ಕ್ರಮ – 17 ಗೃಹ ಬಳಕೆ ಸಿಲಿಂಡರ್‌ಗಳ ಸೀಜ್ |ಹೋಟೇಲ್‌ಗಳು, ಟೀ ಪಾಯಿಂಟ್‌ಗಳಲ್ಲಿ ದಾಳಿ – ಅಧಿಕಾರಿಗಳ ಸಂಯುಕ್ತ ಕಾರ್ಯಾಚರಣೆ.
ಸುರಪುರ ಟೈಮ್ಸ್ ವಾರ್ತೆ
ಸುರಪುರ ; ಪಟ್ಟಣದಲ್ಲಿ ಅನಧಿಕೃತವಾಗಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಕುರಿತು ಬಂದ ಮಾಹಿತಿ ಮೇರೆಗೆ ತಹಸೀಲ್ದಾರ್ ಎಚ್.ಎ.ಸರಕಾವಸ್ ಅವರ ನೇತೃತ್ವದಲ್ಲಿ ವಿಶೇಷ ದಾಳಿ ಕಾರ್ಯಾಚರಣೆ ನಡೆಸಲಾಯಿತು.
ಪಟ್ಟಣದ ವಿವಿಧ ಹೋಟೇಲ್‌ಗಳು, ಟೀ ಪಾಯಿಂಟ್‌ಗಳು ಹಾಗೂ ಆಹಾರ ವಿತರಣೆ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ನಿಯಮ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿ ಒಟ್ಟು 17 ಗೃಹ ಬಳಕೆ ಸಿಲಿಂಡರ್‌ಗಳನ್ನು ಸೀಜ್ ಮಾಡಿದರು.
ಗೃಹ ಬಳಕೆಗಾಗಿ ನೀಡಲಾಗುವ ಸಬ್ಸಿಡಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವುದು ಕಾನೂನುಬಾಹಿರವಾಗಿದ್ದು, ಇದರಿಂದ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂತಹ ಅಕ್ರಮಗಳನ್ನು ತಡೆಯಲು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ದಾಳಿಗಳು ನಡೆಯಲಿವೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆ ಸಿಬ್ಬಂದಿಗಳು, ಕಂದಾಯ ನಿರೀಕ್ಷಕ ಬಸವರಾಜ ಬಿರಾದಾರ ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಭಾಗವಹಿಸಿದ್ದರು. ಸ್ಥಳೀಯ ವ್ಯಾಪಾರಿಗಳಿಗೆ ನಿಯಮಾನುಸಾರ ವಾಣಿಜ್ಯ ಸಿಲಿಂಡರ್‌ಗಳನ್ನು ಮಾತ್ರ ಬಳಸುವಂತೆ ಅಧಿಕಾರಿಗಳು ಸೂಚನೆ ನೀಡಿದರು.
ಅನಧಿಕೃತ ಗ್ಯಾಸ್ ಬಳಕೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


