ನಾಳೆ  ಸುರಪುರ ನಗರದ ಶೆಟ್ಟಿ ಓಣಿಯಲ್ಲಿ ಶ್ರೀ ಶರಣಬಸವೇಶ್ವರರ ಭವ್ಯ ರಥೋತ್ಸವ

ಸುರಪುರ ಟೈಮ್ಸ್ ವಾರ್ತೆ
ಸುರಪುರ ; ನಗರದ ಶೆಟ್ಟಿ ಓಣಿಯಲ್ಲಿರುವ ಪುರಾತನ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಮಾರ್ಚ್ 19ರಂದು ಭವ್ಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಯುಗಾದಿ ಪಾಡ್ಯ ದಿನದಂದು ಬೆಳಿಗ್ಗೆ 6:00 ಗಂಟೆಗೆ ರುದ್ರಾಭಿಷೇಕ ಮತ್ತು ಮಹಾ ಅಭಿಷೇಕ ನೆರವೇರಲಿದೆ. ಈ ಪೂಜಾ ಕಾರ್ಯಕ್ರಮವನ್ನು ಭಾಗ್ಯವಂತ ಕೊಟ್ರಯ್ಯ ಸ್ವಾಮಿ ಮಠಪತಿ ಅವರು ನಡೆಸಿಕೊಡಲಿದ್ದಾರೆ.


ಅಭಿಷೇಕದ ನಂತರ ಶರಣಬಸವೇಶ್ವರ ಮೂರ್ತಿಗೆ ಪುಷ್ಪಾಲಂಕಾರ ಮಾಡಲಾಗುವುದು. ಬಳಿಕ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಬೇವು-ಬೆಲ್ಲ ವಿತರಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ವಿಶೇಷವಾಗಿ, ಸುರಪುರ ನಗರದ 12 ಕೇರಿಗಳ (ಓಣಿಗಳ) ಜನರು ಒಂದಾಗಿ ಸೇರಿ ಪಣಿದಾಂಡು ಆಟ ಆಡುವುದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು, ಈ ಆಟವನ್ನು ನೋಡುವುದೇ ಒಂದು ರೋಮಾಂಚನಕಾರಿ ಅನುಭವವಾಗಿರುತ್ತದೆ.
ಸಂಜೆ 6 ಗಂಟೆಗೆ ದೇವಸ್ಥಾನದಿಂದ ಪಾದಗಟ್ಟೆಯವರೆಗೆ ಶ್ರೀ ಶರಣಬಸವೇಶ್ವರರ ರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ. ಈ ಮಹೋತ್ಸವದಲ್ಲಿ ಸುರಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಶರಣಯ್ಯ ಸ್ವಾಮಿ ಮಠಪತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!