ಯುಕೆಪಿ ಐಸಿಸಿ ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ
ಸುರಪುರ ಟೈಮ್ಸ್ ವಾರ್ತೆ
ಸುರಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) ನೀರಾವರಿ ಸಲಹಾ ಸಮಿತಿಯ (ಐಸಿಸಿ) ಸಭೆಯನ್ನು ಇಂದು ಸಂಜೆ 5.00 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಕರೆಯಲಾಗಿದೆ.
ಯುಕೆಪಿ ಐಸಿಸಿ ಅಧ್ಯಕ್ಷರಾಗಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಇಂದು ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಯಾದಗಿರಿ, ರಾಯಚೂರು, ಕಲ್ಬುರ್ಗಿ, ವಿಜಯಪುರ, ಮತ್ತು ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಂಟಿ ಕೃಷಿ ನಿರ್ದೇಶಕರು ಹಾಗೂ ಸಂಬಂಧಿಸಿದ ತಹಶೀಲ್ದಾರಗಳ ಜೊತೆಗೆ ಬೆಳೆದು ನಿಂತಿರುವ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕಾಲುವೆಗಳಲ್ಲಿ ನೀರು ಹರಿಸುವ ಕುರಿತು ಚರ್ಚಿಸಲು ಸಭೆಯನ್ನು ಕರೆಯಲಾಗಿದೆ.
