ಬೈಚಬಾಳದ ಶ್ರೀ ಬಲಭೀಮೇಶ್ವರ ಜಾತ್ರಾ ಮಹೋತ್ಸವ: ಮಾ.23ರಂದು

ಸುರಪುರ ಟೈಮ್ಸ್ ವಾರ್ತೆ
ಸುರಪುರ;ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಬೈಚಬಾಳ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಬಲಭೀಮೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ.
ಮಾರ್ಚ್ 23, ಸೋಮವಾರ ಬೆಳಿಗ್ಗೆ 7 ಗಂಟೆಯಿಂದ ಕೊಂಡ ಮತ್ತು ನೀರು ತುಂಬುವ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 5 ಗಂಟೆಯಿಂದ ಉರುಳು ಸೇವೆ ಹಾಗೂ ದೀಡ ನಮಸ್ಕಾರ ನಡೆಯಲಿದೆ.
ಮಾರ್ಚ್ 24, ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಪಲ್ಲಕ್ಕಿ ಉತ್ಸವ ಜರುಗಲಿದ್ದು, ಮಧ್ಯಾಹ್ನ 3 ಗಂಟೆಯಿಂದ ಜಂಗಿ ಕುಸ್ತಿ ಸ್ಪರ್ಧೆ ಏರ್ಪಡಿಸಲಾಗಿದೆ. ಕುಸ್ತಿ ಸ್ಪರ್ಧೆಯಲ್ಲಿ ವಿಜೇತರಿಗೆ ಬೆಳ್ಳಿ ಕಡಗ ಬಹುಮಾನ ನೀಡಲಾಗುತ್ತಿದ್ದು, ಭಾಗವಹಿಸಿದ ಎಲ್ಲ ಕುಸ್ತಿ ಪಟುಗಳಿಗೆ ಸೂಕ್ತ ಬಹುಮಾನಗಳನ್ನು ನೀಡಲಾಗುತ್ತದೆ.


ಇದೇ ದಿನ ಭಕ್ತರಿಗಾಗಿ ದಾಸೋಹ ವ್ಯವಸ್ಥೆಯೂ ಕಲ್ಪಿಸಲಾಗಿದೆ.
ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಮಲ್ಲಿಕಾರ್ಜುನ ಎಂ. ಹೂಗಾರ ಅವರು ಎಲ್ಲಾ ಭಕ್ತರಿಗೆ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾಗುವಂತೆ ವಿನಂತಿಸಿದ್ದಾರೆ.
ಬೈಚಬಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಕಲ ಭಕ್ತಾದಿಗಳನ್ನು ಈ ಜಾತ್ರಾ ಮಹೋತ್ಸವಕ್ಕೆ ಭಕ್ತಿಯುತವಾಗಿ ಆಹ್ವಾನಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!