ಪರಿಸರ ಕಾಳಜಿಗೆ ಹೆಜ್ಜೆ ಹಾಕಿದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು|ತಿಂಥಣಿ ಗ್ರಾಮದಲ್ಲಿ ಎನ್‌ಎಸ್‌ಎಸ್ ಜಾತಾ ಮೂಲಕ ಜನಜಾಗೃತಿ.

ಸುರಪುರ ಟೈಮ್ಸ್ ವಾರ್ತೆ
ಸುರಪುರ: ತಾಲೂಕಿನ ತಿಂಥಣಿ ಗ್ರಾಮದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಸುರಪುರದ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ವತಿಯಿಂದ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಜಾತಾ ಕಾರ್ಯಕ್ರಮವನ್ನು ಉತ್ಸಾಹಭರಿತವಾಗಿ ನಡೆಸಲಾಯಿತು.
ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಆಯೋಜಿಸಲಾದ ಈ ಜಾತಾ ಗ್ರಾಮದಲ್ಲೇ ಗಮನ ಸೆಳೆಯಿತು. ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ, “ಪರಿಸರ ಉಳಿಸಿ – ಭವಿಷ್ಯ ಉಳಿಸಿ”, “ಸ್ವಚ್ಛ ಗ್ರಾಮ – ಸುಂದರ ಜೀವನ” ಎಂಬ ಸಂದೇಶಗಳನ್ನು ಜನರಿಗೆ ತಲುಪಿಸಿದರು.


ಗ್ರಾಮದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿದ ಜಾತಾ ಮೂಲಕ ಜನರಲ್ಲಿ ಸ್ವಚ್ಛತೆ, ಪರಿಸರ ಕಾಳಜಿ ಹಾಗೂ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮಕ್ಕೆ ಗ್ರಾಮಸ್ಥರಿಂದ ಸಹಕಾರ ದೊರೆತಿದ್ದು, ವಿದ್ಯಾರ್ಥಿಗಳ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮ ಅಧಿಕಾರಿಗಳಾದ ಶ್ರೀ ರಾಮನಗೌಡ ಅವರ ಮಾರ್ಗದರ್ಶನದಲ್ಲಿ ಉಪನ್ಯಾಸಕರಾದ ಪ್ರಭಾಕರ್, ಕೃಷ್ಣ, ವನಕೆರಪ್ಪ, ಕರೀಷ್ಮಾ, ಸವಿತಾ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಈ ಜಾಗೃತಿ ಜಾತಾ ಗ್ರಾಮದಲ್ಲಿ ಪರಿಸರದ ಬಗ್ಗೆ ಚಿಂತನೆ ಮೂಡಿಸುವುದರ ಜೊತೆಗೆ, ಯುವಜನರಲ್ಲಿ ಸಾಮಾಜಿಕ ಬದ್ಧತೆಯನ್ನು ಬಲಪಡಿಸುವ ಕಾರ್ಯ ಮಾಡಿದೆ.

Leave a Reply

Your email address will not be published. Required fields are marked *

error: Content is protected !!