ಮಾ.31ಕ್ಕೆ ಮಹಾವೀರ ಜಯಂತಿ: ತಾಲೂಕಿನಲ್ಲಿ ಕಡ್ಡಾಯ ಆಚರಣೆ;H.A.ಸರಕಾವಸ್

ಸುರಪುರ ಟೈಮ್ಸ್ ವಾರ್ತೆ
ಸುರಪುರ : ಮಾರ್ಚ್ 31ರಂದು ಭಗವಾನ್ ಮಹಾವೀರ ಜಯಂತಿಯನ್ನು ತಾಲೂಕಿನಲ್ಲಿ ಶ್ರದ್ಧಾ-ಭಕ್ತಿಯಿಂದ ಆಚರಿಸಲು ತಾಲೂಕು ಆಡಳಿತ ನಿರ್ಧರಿಸಿದೆ ಎಂದು ತಹಸೀಲ್ದಾರ್ ಎಚ್.ಎ. ಸರಕಾವಸ್ ತಿಳಿಸಿದ್ದಾರೆ.
ನಗರದ ಪ್ರಜಾಸೌಧದಲ್ಲಿರುವ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಆರೋಗ್ಯ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಲು ಸೂಚಿಸಿದರು. ತಾಲೂಕು ಆಡಳಿತದ ವತಿಯಿಂದ ಅಂದು ಬೆಳಗ್ಗೆ 10 ಗಂಟೆಗೆ ತಹಸೀಲ್ದಾರ್ ಕಚೇರಿಯಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಭಗವಾನ್ ಮಹಾವೀರರ ಜೀವನ, ತತ್ವಗಳು ಮತ್ತು ಅವರ ಸಂದೇಶಗಳ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಮಹಾವೀರರು ಜೈನ ಧರ್ಮದ 24ನೇ ತೀರ್ಥಂಕರರಾಗಿದ್ದು, ಅಹಿಂಸಾ, ಸತ್ಯ ಮತ್ತು ಶಾಂತಿಯ ಸಂದೇಶವನ್ನು ಸಾರಿದ ಮಹಾನ್ ತತ್ವಜ್ಞರಾಗಿದ್ದಾರೆ.ಆದ್ದರಿಂದ ಈ ದಿನವನ್ನು ಜೈನ್ ಸಮುದಾಯದಲ್ಲಿ ಅತ್ಯಂತ ಮಹತ್ವದ ಹಬ್ಬವಾಗಿ ಆಚರಿಸಲಾಗುತ್ತದೆ.
ತಾಲೂಕು ಆಡಳಿತ ಆಯೋಜಿಸುವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜೈನ್ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.


 ಮಾ.28ಕ್ಕೆ ಅಗ್ನಿ ಬನ್ನಿರಾಯ ಜಯಂತಿ
ಇದೇ ವೇಳೆ, ತಾಲೂಕು ಆಡಳಿತದ ವತಿಯಿಂದ ಮಾರ್ಚ್ 28ರಂದು ಅಗ್ನಿ ಬನ್ನಿರಾಯ ಜಯಂತಿಯನ್ನೂ ಆಚರಿಸಲಾಗುವುದು. ಆ ದಿನವೂ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಲು ತಹಸೀಲ್ದಾರ್ ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!