ಶರಣಪ್ಪ ಬಾದ್ಯಾಪುರರ “ಜನರಲ್ ಬೋಗಿ” ಕವನ ಸಂಕಲನ ಇಂದು ಲೋಕಾರ್ಪಣೆ‌|ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 11ಕ್ಕೆ ಸಮಾರಂಭ | ಗಣ್ಯರ ಉಪಸ್ಥಿತಿ.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಇಂದು ಶನಿವಾರ ಬೆಳಗ್ಗೆ ೧೧ ಗಂಟೆಗೆ ಶಿಕ್ಷಕ ಶರಣಪ್ಪ ಬಾದ್ಯಾಪುರ ಅವರ ಸ್ವರಚಿತ “ಜನರಲ್ ಬೋಗಿ” ಕವನ ಸಂಕಲನದ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸಗರನಾಡು ಸೇವಾ ಪ್ರತಿಷ್ಠಾಪನ ವತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರು ಉದ್ಘಾಟಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಿದ್ದರಾಮ ಹೊನ್ಕಲ್ ಕೃತಿಯನ್ನು ಲೋಕಾರ್ಪಣೆಗೊಳಿಸಲಿದ್ದು, ಸಾಹಿತಿ ಪಾರ್ವತಿ ದೇಸಾಯಿ ಬೂದೂರ ಕೆಂಭಾವಿ ಕೃತಿಯ ಕುರಿತು ಮಾತನಾಡಲಿದ್ದಾರೆ.
ಹಿರಿಯ ಸಾಹಿತಿ ಶ್ರೀನಿವಾಸ ಜಾಲವಾದಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣಬಸಪ್ಪ ಯಾಳವಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಗರನಾಡು ಸೇವಾ ಪ್ರತಿಷ್ಠಾಪನ ಅಧ್ಯಕ್ಷ ಪ್ರಕಾಶ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಕಾಲೇಜಿನ ಪ್ರಾಂಶುಪಾಲ ಬಲಭೀಮ ದೇಸಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕೃತಿಯ ಲೇಖಕ ಶರಣಪ್ಪ ಬಾದ್ಯಾಪುರ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!