Breaking News ಭೀಕರ ರಸ್ತೆ ಅಪಘಾತ – ಒಬ್ಬ ಸಾವು, ಮತ್ತೋರ್ವನಿಗೆ ಗಂಭೀರ ಗಾಯ.

ಸುರಪುರ ಟೈಮ್ಸ್ ವಾರ್ತೆ
ಕೆಂಭಾವಿ;ಯಾದಗಿರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಹಿಂದ್ರ ಪಿಕಾಪ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಪರಸನಹಳ್ಳಿ ಗ್ರಾಮದ ನಿಂಗಪ್ಪ (ತಂದೆ: ದವಲಪ್ಪ ಭಜಂತ್ರಿ) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ದುರ್ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!