BREAKING UPDATE   ಸುರಪುರ: ಭೀಕರ ಅಪಘಾತ ಶಾಂತಪುರ ಕ್ರಾಸ್ ಬಳಿ ನಡೆದ ದುರಂತ ಸ್ಥಳಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ ಭೇಟಿ

ಸುರಪುರ ಟೈಮ್ಸ್ ಅಪ್ಡೇಟ್ ಸುದ್ದಿ:
ಸುರಪುರ: ತಾಲೂಕಿನ ಶಾಂತಪುರ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತ ಸ್ಥಳಕ್ಕೆ ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಘಟನೆಯಲ್ಲಿ 7 ಜನರು ಸಜೀವ ದಹನಗೊಂಡಿರುವ ಹಿನ್ನೆಲೆಯಲ್ಲಿ ಶಾಸಕ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಯ ಸಿಬ್ಬಂದಿಯಿಂದ ಘಟನೆ ಕುರಿತು ಮಾಹಿತಿ ಪಡೆದುಕೊಂಡರು.
ಅಪಘಾತದ ನಿಖರ ಕಾರಣ ತಿಳಿದುಕೊಳ್ಳಲು ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!