ಮಲ್ಲಿಬಾವಿ–ಅಮ್ಮಾಪುರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ: ಗುಣಮಟ್ಟಕ್ಕೆ ಆದ್ಯತೆ – ಶಾಸಕ ರಾಜಾ ವೇಣುಗೋಪಾಲ ನಾಯಕ|1 ಕೋಟಿ ವೆಚ್ಚದ ರಸ್ತೆ ನಿರ್ಮಾಣ | ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸೂಚನೆ.
ಸುರಪುರ ಟೈಮ್ಸ್ ವಾರ್ತೆ
ಸುರಪುರ ; ತಾಲೂಕಿನ ಮಲ್ಲಿಬಾವಿ ಗ್ರಾಮದಿಂದ ಅಮ್ಮಾಪುರ (ವಾಯ್ ಬೈಲ ಹನುಮಪ್ಪ ದೇವಸ್ಥಾನದವರೆಗೆ) ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ರಾಜಾ ವೇಣುಗೋಪಾಲ ನಾಯಕ, ರಸ್ತೆ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಮತ್ತು ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ವೇಗವಾಗಿ ಕೈಗೆತ್ತಿಕೊಳ್ಳಲಾಗಿದೆ. ಉತ್ತಮ ರಸ್ತೆಗಳ ನಿರ್ಮಾಣದಿಂದ ಸಾರ್ವಜನಿಕರ ದೈನಂದಿನ ಕಾರ್ಯಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಹೇಳಿದರು.


ಈ ಸಂದರ್ಭದಲ್ಲಿ ಕೆವೈಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಠಲ ಯಾದವ, ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ್ ಬಾಚಿಮಟ್ಟಿ, ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ, ದೊಡ್ಡ ದೇಸಾಯಿ, ರಮೇಶ ದೊರೆ, ರವಿಚಂದ್ರ ಸಾಹುಕಾರ ಹುದ್ದಾರ, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಭೀಮನಗೌಡ ಲಕ್ಷ್ಮೀ ಹೆಮನೂರ, ವೆಂಕಟೇಶ ಬೇಟೆಗಾರ, ಯಲ್ಲಪ್ಪ ಮಲ್ಲಿಬಾವಿ, ಭೀಮು ನಾಯಕ ಮಲ್ಲಿಬಾವಿ ಸೇರಿದಂತೆ ಗ್ರಾಮದ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.


