ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ ಎಲ್ಲರೂ ಕೂಡಿಕೊಂಡು ಸಂಘ ಕಟ್ಟೋಣ; ಸಂಕೀನ್
ಸುರಪುರ ಟೈಮ್ಸ್ ವಾರ್ತೆ
ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಜಿಲ್ಲಾ ಕಾರ್ಯದರ್ಶಿ ಮತ್ತು ಜಿಲ್ಲಾ ಕಾರ್ಯಕಾರಿ ಸಮಿತಿ ಸ್ಥಾನಗಳಿಗೆ ನಾಮ ನಿರ್ದೇಶನ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತೀಚೆಗೆ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ನಾಮ ನಿರ್ದೇಶನ ಮಾಡಲು ಅಧ್ಯಕ್ಷರ ವಿವೇಚನೆಗೆ ಬಿಟ್ಟ ಹಿನ್ನೆಲೆಯಲ್ಲಿ ನೇಮಕ ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ನೇ ಸಾಲಿಗೆ ನೇಮಕ ಮಾಡಲಾಗಿದೆ ಎಂದರು.
ಜಿಲ್ಲಾ ಕಾರ್ಯದರ್ಶಿಗಳನ್ನಾಗಿ ವೆಂಕಟಗಿರಿ ದೇಶಪಾಂಡೆ ಮತ್ತು ನರಸಪ್ಪ ನಾರಾಯಣೋರ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಹನುಮಂತು ಪಿ., ಗಣೇಶ ಪಾಟೀಲ್, ಗವಿಸಿದ್ದೇಶ ಹೊಗರಿ, ನಾಗರಾಜ ಕೋಟೆ ಮತ್ತು ಭೀಮಣ್ಣ ವಡವಟ್ ಅವರನ್ನು ನೇಮಕ ಮಾಡಲಾಗಿದೆ ಎಂದರು.
ಸಂಘವನ್ನು ಎಲ್ಲರೂ ಕೂಡಿಕೊಂಡು ಕಟ್ಟುವ ಮೂಲಕ ಉತ್ತಮವಾಗಿ ಕೆಲಸ ಮಾಡೋಣ ಎಂದರು.
ಪತ್ರಕರ್ತರ ಹಿತ ಕಾಯಲು ಶ್ರಮಿಸುವುದು ತುಂಬ ಅಗತ್ಯವಿದೆ. ಜವಾಬ್ದಾರಿಯುತವಾಗಿ ಕೆಲಸ ಮಾಡುವ ಮೂಲಕ ಪತ್ರಕರ್ತರ ವಿಶ್ಚಾಸ ಉಳಿಸಿಕೊಳ್ಳಬೇಕು ಎಂದರು.
ಪತ್ರಕರ್ತರಿಗೆ ಸರಕಾರದಿಂದ ಸೌಲಭ್ಯಗಳನ್ನು ಕೊಡಿಸಲು ಒಟ್ಟಿಗೆ ಪ್ರಯತ್ನ ಮಾಡೋಣ ಎಂದು ತಿಳಿಸಿದರು.

